
ಮಾಲೂರು ಜು.೩- ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಒಗ್ಗಟ್ಟಿನಿಂದ ಶಾಸಕರ ನೇತೃತ್ವದಲ್ಲಿ ನಡೆಯುತ್ತಿರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸುತ್ತಿರುವುದಾಗಿ ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಜಿ ಮಧುಸೂಧನ್ ಹೇಳಿದರು.
ಅವರು ಪಟ್ಟಣದ ಮಾರುತಿ ಬಡಾವಣೆಯ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ಇತ್ತೀಚಿಗೆ ಕೋಮುಲ್ ನಿರ್ದೇಶಕರಾಗಿ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದವರಿಗೆ ಮಾಲೂರು ಕಸಬಾ ಹಾಗೂ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ನೂತನ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದರು.
ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವು ಬಲಿ?ವಾಗಿದೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಒಗ್ಗಟ್ಟಿದೆ ಒಗ್ಗಟ್ಟಿನ ಪ್ರತಿಫಲದಿಂದ ತಾಲೂಕಿನಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸುತ್ತಿದ್ದಾರೆ, ಕಾಂಗ್ರೆಸ್ ಪಕ್ಷದಲ್ಲಿ ತಾಳ್ಮೆ ಪಕ್ಷನಿ? ಹಾಗೂ ಪ್ರಾಮಾಣಿಕತೆ ಇದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಲ್ಲಿ ಶಾಸಕರು ಅವಕಾಶಗಳನ್ನು ಕಲ್ಪಿಸುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಚುನಾವಣಾ ಪೂರ್ವದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಅನು?ನಕ್ಕೆ ತಂದು ಬಡ ಜನತೆಗೆ ಅನುಕೂಲ ಕಲ್ಪಿಸಿದೆ ಜೊತೆಗೆ ಅಭಿವೃದ್ಧಿಯನ್ನು ಸಹ ಮಾಡುತ್ತಿದ್ದು, ತಾಲೂಕಿನ ಅಭಿವೃದ್ಧಿಗೆ ಶಾಸಕರು ಹೆಚ್ಚುವರಿ ಅನುದಾನಗಳನ್ನು ತಂದು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ. ಮುಂಬರುವ ದಿನಗಳಲ್ಲಿಯೂ ಸಹ ನಡೆಯಲಿರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಒಗ್ಗಟ್ಟು ಹಾಗೂ ಪಕ್ಷ ಸಂಘಟನೆಯಿಂದ ಶಾಸಕರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶಗಳು ಲಭಿಸಲಿವೆ ಎಂದರು.
ಕೆಪಿಸಿಸಿ ಸದಸ್ಯ ಎಂ ಎಸ್ ಪ್ರದೀಪ್ ರೆಡ್ಡಿ ಮಾತನಾಡಿ ತಾಲೂಕಿನಲ್ಲಿ ಕಳೆದ ಹತ್ತು ವ?ಗಳಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಾಕ? ಬದಲಾವಣೆಯಾಗಿದೆ. ಶಾಸಕ ಕೆ ವೈ ನಂಜೇಗೌಡ ಅವರ ಹೋರಾಟ ಹಾಗೂ ಪಕ್ಷದ ಕಾರ್ಯಕರ್ತರ ಪರಿಶ್ರಮದಿಂದ ಕಾಂಗ್ರೆಸ್ ಪಕ್ಷದ ಶಾಸಕರು ಎರಡು ಬಾರಿ ಆಯ್ಕೆಯಾಗಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅವಕಾಶಗಳನ್ನು ಪಡೆಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ತ್ಯಾಗ ಮನೋಭಾವ, ತಾಳ್ಮೆ, ಪಕ್ಷ ನಿ? ಇದ್ದಲ್ಲಿ ಅವಕಾಶಗಳು ನಮ್ಮನ್ನು ಹುಡುಕಿಕೊಂಡು ಬರುತ್ತವೆ. ಆದರೆ ಪಕ್ಷದಲ್ಲಿ ಕೆಲವರು ಅಧಿಕಾರವನ್ನು ಪಡೆದು ಬೇರೆ ಪಕ್ಷಗಳಿಗೆ ಹೋಗಿದ್ದಾರೆ. ಪ್ರಸ್ತುತ ಪದವಿ ಮತ್ತು ಚುನಾವಣೆ ಯಾರಲ್ಲಿ ಹಣವಿದ್ದರೂ ಸಹ ಪಡೆಯಬಹುದಾಗಿದೆ, ಆದರೆ ಪಕ್ಷದಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಒಗ್ಗಟ್ಟಾಗಿದ್ದಲ್ಲಿ ಪಕ್ಷ ನೀಡುವ ಅವಕಾಶಗಳಲ್ಲಿ ಅಧಿಕಾರವನ್ನು ಪಡೆಯಬಹುದಾಗಿದೆ ಎಂದರು.
ಕೋಮುಲ್ ನೂತನ ನಿರ್ದೇಶಕರಾದ ಶ್ರೀನಿವಾಸ್, ಕಾಂತಮ್ಮ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ದಿನ್ನಹಳ್ಳಿ ರಮೇಶ್, ಟೇಕಲ್ ವಿನೋದ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೇಗೌಡ, ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ ವಿಜಯನರಸಿಂಹ, ಕೆಪಿಸಿಸಿ ಸದಸ್ಯ ಸೋಮಣ್ಣ, ದರಖಾಸ್ತು ಸಮಿತಿ ಅಧ್ಯಕ್ಷರಾದ ಹನುಮಂತಪ್ಪ, ಎಸ್.ಸಿ.ನಾರಾಯಣಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಆರ್.ಶ್ರೀನಿವಾಸ್, ಪುರಸಭಾ ಅಧ್ಯಕ್ಷೆ ವಿಜಯಲಕ್ಷ್ಮಿ ನಾರಾಯಣ್, ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಭಾರತಿ ಶಂಕರಪ್ಪ, ಕೋಮಲ, ದರ್ಕಾಸ್ಥ ಸಮಿತಿ ಸದಸ್ಯ ನಾಗಪುರ ನವೀನ್, ಬನಹಳ್ಳಿ ಸತೀಶ್ ಎಸ್ಸಿ ಬ್ಲಾಕ್ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಹನುಮಂತರೆಡ್ಡಿ ತಿರುಮಲಹಟ್ಟಿ ಬಾಬು, ಲಕ್ಕೂರು ಬಾಬು, ಮಣಿಶೆಟ್ಟಹಳ್ಳಿ ನವೀನ್, ನೊಸಗೆರೆ ಶಿವು, ಮಾಸ್ತಿ ಪ್ರವೀಣ್, ಅಭಿ ಮಂಜು, ಪ್ರಗತಿ ಶ್ರೀನಿವಾಸ್, ಗೋಪಾಲಕೃಷ್ಣ ಅಬ್ಬಯಪ್ಪ, ಹೇಮಮಾಲಿನಿ, ಲಕ್ಷ್ಮಮ್ಮ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.