ಸಂಜೆವಾಣಿ ವಾರ್ತೆ,
ವಿಜಯಪುರ,ಸೆ.೧೭:ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಾಂಗ್ರೆಸ್ ಮೀನುಗಾರರ ಸಮಿತಿ ಸಭೆ ಜರುಗಿತು.
ಕೆಪಿಸಿಸಿ ಮೀನುಗಾರರ ಸಮಿತಿ ಅಧ್ಯಕ್ಷ ಮಂಜುನಾಥ ಸುಣಗಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಸಂಘಟನೆ ಮತ್ತಿತರರ ಮಹತ್ವದ ವಿಷಯಗಳ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಮತ ಕಳ್ಳತನÀ ನಿಲ್ಲಿಸಿ ಎಂಬ ವಿನೂತನ ಕಾರ್ಯಕ್ರಮ ಉದ್ದೇಶಿಸಿ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹಣೆ ಮಾಡಲಾಯಿತು
ಈ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕ ರಾಜು ಆಲಗೂರ, ಡಿಸಿಸಿ ಉಪಾಧ್ಯಕ್ಷರಾದ ಗಂಗಾಧರ ಸಂಬಣ್ಣಿ, ಸುಭಾಷ ಕಾಲೇಭಾಗ, ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ಕೃಷ್ಣ ಕಾಮಟೆ, ಸಾಹೇಬಗೌಡ ಬಿರಾದಾರ, ರಮೇಶ ಗುಬ್ಬೇವಾಡ, ಯಾಕುಬ್ ನಾಟೀಕಾರ, ಮೀನುಗಾರರ ಕಾಂಗ್ರೆಸ್ ಚಡಚಣ ನಗರ ಘಟಕ ಅಧ್ಯಕ್ಷ ಪರಮಾನಂದ ಕೋಳಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ ಹಾಗೂ ಜಿಲ್ಲಾ, ತಾಲೂಕು, ಬ್ಲಾಕ್ ಮಟ್ಟದ ಪದಾಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

























