Home ಜಿಲ್ಲೆ ಕಲಬುರಗಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಕಾಂಗ್ರೆಸ್ ಅಸಹಕಾರ: ಮರತೂರಕರ್

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಕಾಂಗ್ರೆಸ್ ಅಸಹಕಾರ: ಮರತೂರಕರ್

ಕಲಬುರಗಿ:ಏ.23: ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲು ಹೊರಟಿದ್ದ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳ ಬೆಂಬಲ ನೀಡದ ಹಿನ್ನೆಲೆಯಲ್ಲಿ ಸೋಲಾಗಿದೆ. ಈ ಮಹಿಳಾ ಮೀಸಲಾತಿ ಮಸೂದೆ ಅಂಗಿಕರಿಸಲು ಎಲ್ಲ ರಾಜಕೀಯ ಪಕ್ಷಗಳ ಬೆಂಬಲ ವ್ಯಕ್ತಪಡಿಸಬೇಕು ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ತಿಳಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಮಹಿಳಾ ಮೀಸಲಾತಿ ಕಾಯ್ದೆಯನ್ನು ಕಳೆದ ಏಳು ದಶಕಗಳಿಂದಲೂ ಯಾವುದೇ ಪ್ರಯತ್ನ ಮಾಡಿಲ್ಲ. ಪ್ರಥಮ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಸಚಿವ ಸಂಪುಟದಲ್ಲಿ ಕಾನೂನು ಸಚಿವರಾಗಿದ್ದ ಡಾ.ಬಿ.ಆರ್.ಅಂಬೇಡ್ಕರ ಅವರು ಮಹಿಳೆಯರಿಗೆ ಸಮಾನ ಅವಕಾಶದ ಹಕ್ಕು ನೀಡಬೇಕು ಎಂಬ ಉದ್ದೇಶ ಹೊಂದಿದ್ದರು. ಆದರೆ, ದಶಕಗಳ ಕಾಲದ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷಕ್ಕೆ ಇಂದಿಗೂ ಮನಸ್ಥಿತಿ ಪರಿವರ್ತನೆಯಾಗಿಲ್ಲ ಎಂದು ಟೀಕಿಸಿದರು.
ಮಹಿಳಾ ಮೀಸಲಾತಿ ಮುಸೂದೆಗೆ ಕಾಂಗ್ರೆಸ್, ಸಮಾಜವಾದಿ, ಡಿಎಂಕೆ ಸೇರಿದಂತೆ ಅನೇಕ ಪಕ್ಷಗಳು ಬೆಂಬಲಸದ ಪರಿಣಾಮ ಮೀಸಲಾತಿ ಕಾಯ್ದೆ ಅಂಗೀಕಾರಗೊಳ್ಳದೇ ಹೋಗಿದೆ. 2023 ರಲ್ಲಿ ಮಹಿಳಾ ಮೀಸಲು ಮಸೂದೆ ಮಂಡನೆಯಾಗಿದ್ದರೂ ಜಾರಿಯಾಗದೇ ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಪ್ರಧಾನಿ ನರೇಂದ್ರ ಮತ್ತು ಗೃಹ ಸಚಿವ ಅಮಿತಾ ಶಾ ಅವರು ಎಲ್ಲ ರಾಜಕೀಯ ಪಕ್ಷಗಳೊಂದಿಗೆ ಪೂರ್ವಭಾವಿ ಚರ್ಚೆ ನಡೆಸಿ ಬೆಂಬಲಕ್ಕೆ ಮನವಿ ಮಾಡಿದ್ದರೂ ಅನೇಕ ರಾಜಕೀಯ ಪಕ್ಷಗಳು ಬೆಂಬಲಿಸಲಿಲ್ಲ ಎಂದು ದೂರಿದರು.2011 ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡನೆಯೂ ದೇಶದ ರಾಜಕೀಯ ಚಿತ್ರಣಬದಲಿಸಲು ಕಾರಣವಾಗುತ್ತದೆ. ಮೂರು ಮಸೂದೆಗಳ ಜಾರಿಗೆ ಅನೇಕ ರಾಜಕೀಯ ಪಕ್ಷಗಳ ಬೆಂಬಲಿಸದೇ ಹೋಗಿದ್ದರಿಂದ ಜಾರಿ ಸಾಧ್ಯವಾಗಿಲ್ಲ. ಮಹಿಳೆಯರು ಕುರಿತು ನಿಜವಾದ ಕಾಳಜಿಯಿದ್ದರೆ ಮಸೂದೆಗೆ ಬೆಂಬಲಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.