Home ಜಿಲ್ಲೆ ಬೆಂಗಳೂರು ಕಾಂಗ್ರೆಸ್ ಪಕ್ಷ ಕಾರ್ಮಿಕರ ಜೊತೆಗಿದೆ

ಕಾಂಗ್ರೆಸ್ ಪಕ್ಷ ಕಾರ್ಮಿಕರ ಜೊತೆಗಿದೆ

ರಾಮನಗರ,ಮೇ೦೩: ಕಾರ್ಮಿಕರು ದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಅಗತ್ಯವಾಗಿದ್ದು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಬಡವರ, ಶೋಷಿತರ ಹಾಗೂ ಕೂಲಿಕಾರ್ಮಿಕರ ಪರವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟರಾಜು ತಿಳಿಸಿದರು.


ನಗರದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ತಮ್ಮನ್ನು ಸನ್ಮಾನಿಸಿದ ಕ್ಷಣವನ್ನು ಹಂಚಿಕೊಂಡರು.


ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ, ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ ಸೇರಿದಂತೆ ಹಲವು ಸಚಿವರು, ನಾಯಕರ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿದ್ದು ತಮಗೆ ಸಂತಸ ತಂದಿದೆ ಎಂದರು.


ಕಾಂಗ್ರೆಸ್ ಪಕ್ಷ ಯಾವಾಗಲೂ ಕಾರ್ಮಿಕರ ಪರವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಾರ್ಮಿಕರಿಗೆ ಅನೇಕ ಸವಲತ್ತುಗಳನ್ನು ಒದಗಿಸಿದೆ. ಜಿಲ್ಲಾ ಕಾರ್ಮಿಕ ಘಟಕವೂ ಸಹ ಕಾರ್ಮಿಕರ ಹಿತ ಚಿಂತನೆಯೊಡನೆ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಕೆಲಸವನ್ನು ಗುರುತಿಸಿ ಕಾರ್ಮಿಕ ದಿನಾಚರಣೆ ವೇಳೆ ಸನ್ಮಾನ ಮಾಡಿದ್ದು ಮತ್ತಷ್ಟು ಹುರುಪು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ಹೆಚ್ಚು ಸಕ್ರಿಯವಾಗಿ ತೊಡಗಿಸಿಕೊಳ್ಳುವೆ. ಶ್ರಮಿಕ ವರ್ಗದ ಸಂಘಟನೆ ತಮಗೆ ಇಷ್ಟವಾದ ಕಾರ್ಯವಾಗಿದೆ ಎಂದು ತಿಳಿಸಿದರು.