Home ಮುಖಪುಟ ಸುದ್ದಿ ರಾಹುಲ್ ವಿರುದ್ಧ ಎಫ್‌ಐಆರ್ ಖಂಡಿಸಿ ಕೈ ಪ್ರತಿಭಟನೆ

ರಾಹುಲ್ ವಿರುದ್ಧ ಎಫ್‌ಐಆರ್ ಖಂಡಿಸಿ ಕೈ ಪ್ರತಿಭಟನೆ

ಬೆಂಗಳೂರು,ಸೆ.೨- ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸರ್ಕಾರ ದುರುದ್ದೇಶಪೂರಿತವಾಗಿ ಸುಳ್ಳು ಎಫ್‌ಐಆರ್ ದಾಖಲಿಸಿರುವುದು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಮೈದಾನವನ್ನು ಶುದ್ಧೀಕರಿಸಿದ ಘಟನೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.


ಪ್ರತಿಭಟನೆ ವೇಳೆ ಸಿಎಂ ಡಿ.ಕೆ.ಶಿವಕುಮಾರ್‌ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಎಚ್.ಸಿ. ಬಾಲಕೃಷ್ಣ, ಶಿವಲಿಂಗೇಗೌಡ ,ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಶಾಸಕರು ಕಾಂಗ್ರೆಸ್‌ನಾಯಕರು, ಮುಖಂಡರು,ಕಾರ್ಯಕರ್ತರು ಪಾಲ್ಗೊಂಡರು.


ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಯಾವುದೇ ತಪ್ಪು ಮಾಡಿಲ್ಲ.ಅನಗತ್ಯವಾಗಿ ಉತ್ತರಾಖಂಡ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆರೋಪಿಸಿದರು.


ರಾಹುಲ್ ಗಾಂಧಿ ಅವರು ಏನು ತಪ್ಪು ಮಾಡಿದ್ದಾರೆ? ಅವರು ಪ್ರಶ್ನೆ ಮಾಡಿದ್ದೇ ತಪ್ಪಾ? ಶುದ್ಧೀಕರಣ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸುವ ಬದಲು, ಪ್ರಶ್ನೆ ಮಾಡಿದ ರಾಹುಲ್ ಗಾಂಧಿ ಅವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಇದು ದುರುದ್ದೇಶಪೂರ್ವಕ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದರು.


ರಾಹುಲ್ ಗಾಂಧಿ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರಗಳು ಕಾನೂನು ಕ್ರಮದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಆರೋಪಿಸಿದ ಸಿದ್ದರಾಮಯ್ಯ,ಸಂವಿಧಾನದ ಮೇಲೆ ನಂಬಿಕೆ ಇರುವ ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು.ಜೊತೆಗೆ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲೂ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.ಅಲ್ಲದೆ,ಸಂವಿಧಾನವನ್ನು ಗೌರವಿಸದ ಹಾಗೂ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸದವರ ವಿರುದ್ಧ ಹೋರಾಟ ಮುಂದುವರಿಯಬೇಕು ಎಂದರು.


ಸಚಿವ ಎಚ್.ಸಿ. ಬಾಲಕೃಷ್ಣ ಮಾತನಾಡಿ,ರಾಹುಲ್ ಗಾಂಧಿ ವಿರುದ್ಧ ನಡೆದಿರುವ ಘಟನೆ ಮಾನವ ಸಮಾಜವೇ ತಲೆತಗ್ಗಿಸುವಂತಹದ್ದು ಎಂದು ಟೀಕಿಸಿದರು.
ರಾಹುಲ್ ಗಾಂಧಿ ಹಿಂದೆ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಸಚಿವ ಕೃಷ್ಣ ಬೈರೇಗೌಡ ಮಾತನಾಡಿ,ರಾಹುಲ್ ಗಾಂಧಿ ಯುವಕರು, ಮಹಿಳೆಯರು ಹಾಗೂ ಬಡವರ ಪರವಾಗಿ ಹೋರಾಟ ಮಾಡುತ್ತಿರುವುದರಿಂದ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದರು.ಜೊತೆಗೆ ಯಾವುದೇ ಪ್ರಕರಣಗಳಿಂದ ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ಪಕ್ಷ ಹಿಂಜರಿಯುವುದಿಲ್ಲ ಎಂದರು.


ಸಚಿವ ಶಿವಲಿಂಗೇಗೌಡ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರಂತಹ ದಲಿತ ನಾಯಕರಿಗೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿರುವ ಘಟನೆಯನ್ನು ಪ್ರಶ್ನಿಸುವ ಬದಲು, ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟೀಕಿಸಿದರು.


ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ,ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಿರುವ ಘಟನೆಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು.


ರಾಹುಲ್ ಗಾಂಧಿ ಯಾವುದೇ ಎಫ್‌ಐಆರ್‌ಗೆ ಹೆದರುವುದಿಲ್ಲ. ಪ್ರಜಾಪ್ರಭುತ್ವವನ್ನು ಉಳಿಸಲು ಅವರು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಿಂದಲೇ ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಮತ್ತಷ್ಟು ವೇಗ ನೀಡಲಾಗುವುದು ಎಂದು ಘೋಷಿಸಿದರು.