
ಕಲಬುರಗಿ,ಜೂ.9-ಕೇಂದ್ರದ ಬಿಜೆಪಿ ಸರಕಾರ ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಅನ್ನಪೂರ್ಣ ಕ್ರಾಸ್ ಬಳಿ ಇಂದು ಪ್ರತಿಭಟನೆ ನಡೆಸಲಾಯಿತು.
ಜನವಿರೋಧಿ, ರೈತ ವಿರೋಧಿಯಾದ ಕೇಂದ್ರದ ಬಿಜೆಪಿ ಸರ್ಕಾರ ಗ್ಯಾಸ್, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡುವುದುರ ಮೂಲಕ ದೇಶದ ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಕೂಡಲೇ ಗ್ಯಾಸ್, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಇಳಿಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪಕ್ಷದ ಮುಖಂಡರಾದ ಸುಭಾಷ ರಾಠೋಡ್, ಭೀಮರಾವ ಟಿ.ಟಿ., ರಾಜಗೋಪಾಲ ರೆಡ್ಡಿ, ಮಹಾಂತಪ್ಪ ಸಂಗಾವಿ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ, ಡಾ.ಕಿರಣ್ ದೇಶಮುಖ, ಫಾರುಕ್ ಮಣಿಯಾರ್, ಯುವ ಘಟಕದ ಅಧ್ಯಕ್ಷ ಶಕೀಲ್ ಸರಡಗಿ, ಈರಣ್ಣ ಝಳಕಿ, ಶಿವಾನಂದ ಹೊನಗುಂಟಿ, ನಯಿಮ್ ಖಾನ್, ಕಾರ್ತಿಕ್ ನಾಟಿಕಾರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ರೇಣುಕಾ ಸಿಂಗೆ, ಸವಿತಾ ಹಣಮಂತ ವಂಟಿ ಸೇರಿದಂತೆ ಪಕ್ಷದ ಅನೇಕ ಜನ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.































