Home ಜಿಲ್ಲೆ ಕಲಬುರಗಿ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ದೀಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ದೀಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಕಲಬುರಗಿ,ಆ.17-ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದವಾನಿಯಲ್ಲಿ ಬಹಿರಂಗ ಸಭೆ ನಡೆಸಿದ ವೇದಿಕೆಯಲ್ಲಿ ಕೋಮುವಾದಿಗಳು ಶುದ್ಧೀಕರಣ ನಡೆಸಿದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿತು.
ನಗರದ ಸೇಡಂ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಅನ್ನಪೂರ್ಣ ಕ್ರಾಸ್‍ವರೆಗೆ ಪ್ರತಿಭಟನೆ ನಡೆಸಲಾಯಿತು. ಕೋಮುವಾದಿಗಳ ಮನಸ್ಥಿತಿಯ ವಿರುದ್ಧ ಧಿಕ್ಕಾರ ಕೂಗುವುದರ ಜೊತೆಗೆ ಟೈರ್‍ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು.
ಪಕ್ಷದ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಸುಭಾಷ ರಾಠೋಡ್, ಜಿಡಿಎ ಅಧ್ಯಕ್ಷ ಮಜರ್ ಆಲಂಖಾನ್, ಡಾ.ಕಿರಣ್ ದೇಶಮುಖ, ಸಂತೋಷ ಪಾಟೀಲ ದಣ್ಣೂರ್, ಅಶೋಕ ವೀರನಾಯಕ್, ಈರಣ್ಣ ಝಳಕಿ, ಶಿವಾನಂದ ಹೊನಗುಂಟಿ, ರಾಜೀವ್ ಜಾನೆ, ವಹಾಜ್ ಬಾಬಾ ಜುನೈದಿ, ಮಾಜಿ ಮೇಯರ್ ಸೈಯ್ಯದ್ ಅಹಮದ್, ಫರಾಜ್ ಉಲ್ ಇಸ್ಲಾಂ, ದಿನೇಶ ದೊಡ್ಡಮನಿ, ಮಲ್ಲಪ್ಪ ಹೊಸಮನಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.