Home ಜಿಲ್ಲೆ ಕಲಬುರಗಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿ: ಸುಭಾಷ್ ವಿ. ರಾಠೋಡ

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿ: ಸುಭಾಷ್ ವಿ. ರಾಠೋಡ

ಚಿಂಚೋಳಿ: ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಚಿಂಚೋಳಿ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಚುನಾವಣಾ ಸಿದ್ಧತೆಗಳನ್ನು ಆರಂಭಿಸಬೇಕು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಸುಭಾಷ್ ವಿ. ರಾಠೋಡ ಕರೆ ನೀಡಿದರು
ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಈಗಾಗಲೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಿಗೆ ಮೀಸಲಾತಿ ಪ್ರಕಟಿಸಿದ್ದು, ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವರು ಚುನಾವಣೆಗಳನ್ನು ನಡೆಸುವ ಕುರಿತು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಂಚೋಳಿ ತಾಲೂಕಿನ ಎಲ್ಲ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತರಾಗಿ ಚುನಾವಣೆಗೆ ಸಜ್ಜಾಗಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಪ್ರಯೋಜನಗಳನ್ನು ಪ್ರತಿಯೊಂದು ಮನೆಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು. ಸರ್ಕಾರದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಜನರಿಗೆ ಮಾಹಿತಿ ನೀಡುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ತಿಳಿಸಿದರು.
ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಈಗಿನಿಂದಲೇ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಚುನಾವಣೆಯಲ್ಲಿ ಯಶಸ್ಸು ಸಾಧಿಸಲು ಶ್ರಮಿಸಬೇಕು ಎಂದು ಸುಭಾಷ್ ವಿ. ರಾಠೋಡ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರ ಉಪಸ್ಥಿತಿ
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷ ಬಸವರಾಜ ಆರ್. ಮಲಿ, ತಾಲೂಕು ವಕ್ತಾರ ಶರಣು ಪಾಟೀಲ್ ಮೊತಕಪಳ್ಳಿ, ಪಕ್ಷದ ಮುಖಂಡರಾದ ಅನೀಲ್ ಜಮಾದಾರ, ಅಜೀತ್ ಪಾಟೀಲ್, ಆನಂದ್ ಟೈಗರ್, ಅಬ್ದುಲ್ ಬಾಸಿದ್, ಲಕ್ಷ್ಮಣ್ ಅವಂಟಿ, ಲಕ್ಷ್ಮೀದೇವಿ ಮಂಜುನಾಥ ಕೊರವಿ, ಪ್ರವೀಣ್ ಟಿಟಿ, ಶೈಲೇಶ್ ಹುಲಿ, ಸಂತೋಷ್ ಗುತ್ತೇದಾರ್, ಆರ್. ಗಣಪತರಾವ್, ಮಕ್ಸೂದ್ ಸೌದಾಗರ್, ವಿಶ್ವನಾಥ ಹೊಡೆಬೀರನಳ್ಳಿ, ಮತ್ತೇನ್ ಸೌದಾಗರ್, ಖಲೀಲ್ ಪಟೇಲ್, ಸೈಯದ್ ಶಬ್ಬೀರ್, ಜನಾರ್ದನ ಪಾಟೀಲ್ ಶಾದಿಪುರ, ಸಂಜು ಪೂಜಾರಿ ರಾಣಾಪುರ, ಸಂಗಯ್ಯ ಸ್ವಾಮಿ, ಶೇಕ್ ಫರೀದ್, ಚಾಂದ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.