Home ಕ್ರೈಂ ಸುದ್ದಿಗಳು ಕಳ್ಳತನ ಪ್ರಕರಣ ರಾಜಿಗೆ 50 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಪೇದೆ

ಕಳ್ಳತನ ಪ್ರಕರಣ ರಾಜಿಗೆ 50 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಪೇದೆ

ಗುರುಮಠಕಲ್: ಕಳ್ಳತನ ಪ್ರಕರಣವೊಂದನ್ನು ರಾಜಿ ಮಾಡಿಸುವುದಾಗಿ ಹೇಳಿ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗುರುಮಠಕಲ್ ಪೆÇಲೀಸ್ ಠಾಣೆಯ ಸಿಪಿಸಿ ಅಶೋಕ್ ಅವರು ಯಾದಗಿರಿ ಲೋಕಾಯುಕ್ತ ಪೆÇಲೀಸರ ಬಲೆಗೆ ಬಿದ್ದಿದ್ದಾರೆ.

ತಾತಳಗೇರಾ ಗ್ರಾಮದ ಖಾಜಾಬಿ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೆÇಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕಳ್ಳತನ ಪ್ರಕರಣವನ್ನು ರಾಜಿ ಮಾಡಿಸಲು ಪೆÇಲೀಸ್ ಸಿಬ್ಬಂದಿ ಅಶೋಕ್ ಅವರು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅದರಂತೆ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೆÇಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ-1988ರ ಕಲಂ 7(ಎ) ಅಡಿಯಲ್ಲಿ ಯಾದಗಿರಿ ಲೋಕಾಯುಕ್ತ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಲೋಕಾಯುಕ್ತ ಡಿವೈಎಸ್‍ಪಿ ಜೆ.ಎಚ್. ಇನಾಮದಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಅಮರನಾಥ, ನವೀನ್, ಗಂಗಾಧರ, ರಣೋಜಿ ಹಾಗೂ ಸದ್ದಾಂ ಪಾಲ್ಗೊಂಡಿದ್ದರು. ಲೋಕಾಯುಕ್ತ ಪೆÇಲೀಸ್ ಅಧೀಕ್ಷಕ ಸಿದ್ರಾಜು ಸಿ. ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದೆ.

ಪೆÇಲೀಸ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.