Home ಜಿಲ್ಲೆ ಸಂವಿಧಾನ ಭಾರತ ದೇಶದ ಆತ್ಮವಿದ್ದಂತೆ: ವೆಂಕಟೇಶ್ ವಂದಾಲ್

ಸಂವಿಧಾನ ಭಾರತ ದೇಶದ ಆತ್ಮವಿದ್ದಂತೆ: ವೆಂಕಟೇಶ್ ವಂದಾಲ್

ಬಸವನ್ ಬಾಗೇವಾಡಿ,ಏ.17-ಅಂಬೇಡ್ಕರ್ ಅವರು ಸಮಾಜದಲ್ಲಿ ತುಳಿತಕ್ಕೆ ಒಳಗಾದ ಜನರಿಗೆ ಸಂವಿಧಾನದ ಮೂಲಕ ಜೀವನ ಕೊಟ್ಟಿದ್ದಾರೆ. ಅಲ್ಲದೆ ಸಂವಿಧಾನವು ಭಾರತ ದೇಶದ ಆತ್ಮವಿದ್ದಂತೆ ಎಂದು ತಾಲೂಕ ಪಂಚಾಯಿತಿ ಕಾರ್ಯನಿರ್ವಕ ಅಧಿಕಾರಿ ವೆಂಕಟೇಶ ವಂದಾಲ್ ಹೇಳಿದರು.
ತಾಲೂಕ ಆಡಳಿತ ಸಮಾಜ ಕಲ್ಯಾಣ ಇಲಾಖೆ ಸಂಯೋಗದಲ್ಲಿ ಪಟ್ಟಣದ ಬಸವಭವನದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಉತ್ಸವದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಉಪನ್ಯಾಸಕರಾಗಿ ಆಗಮಿಸಿದ್ದ ಕಣ್ಣೂರು ಸರ್ಕಾರಿ ಪಿಯು ಕಾಲೇಜ್ ಉಪನ್ಯಾಸಕರಾದ ಡಾ.ರೂಪ ಎಸ್ ಜೋಗುಳೇಕರ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂಬ ಅಸ್ತ್ರದ ಮೂಲಕ ಸಾಮಾಜಿಕ ಸಮಾನತೆ ಮಾನವ ಹಕ್ಕುಗಳು ಮತ್ತು ಸಂವಿಧಾನದ ಮೌಲ್ಯಗಳನ್ನು ಪ್ರತಿಪಾದಿಸಿದ, ಸ್ತ್ರೀಯರ ಹಕ್ಕುಗಳಿಗಾಗಿ ಹೋರಾಡಿದ ವiಹಾನ್ ವ್ಯಕ್ತಿ ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಲೂಕ ದಂಡಾಧಿಕಾರಿ ವೈ.ಎಸ್. ಸೋಮನಕಟ್ಟಿ ಮಾತನಾಡಿ, ಅಂಬೇಡ್ಕರ್ ಅವರನ್ನು ಭಾರತೀಯರೆಲ್ಲರೂ ಪ್ರತಿನಿತ್ಯ ಪೂಜಿಸಿ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯವಾಗಿದೆ ಎಂದರು. ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕುಮಾರಿ ಸುಪ್ರೀತಾ ಮಾದರ್, ಕುಮಾರಿ ಮಂಗಲವ್ವ ಲಮಾಣಿ, ಕುಮಾರಿ ರೇವತಿ ಗುಡಿಮನಿ, ಕುಮಾರಿ ಸ್ವಾತಿ ಬಂಗಾರಿ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯ ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಜರುಗಿತು. ಮುಖಂಡರು ಪಾಲ್ಗೊಂಡಿದ್ದರು. ವೇದಿಕೆಯ ಮೇಲೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪುರಸಭೆ ಮುಖ್ಯ ಅಧಿಕಾರಿ ವಿದ್ಯಾಧರ್ ಕಲಾದಗಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಂಜುಳಾ ಹಿರೇಮನಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಸಮಾಜ ಕಲ್ಯಾಣ ಇಲಾಖೆಯ ಅಧ್ಯಕ್ಷರಾದ ಎಂ.ಎಂ. ದಪ್ಪೇದಾರ್ ನಡೆಸಿಕೊಟ್ಟರು ಕಾರ್ಯಕ್ರಮದ ನಿರೂಪಣೆಯನ್ನು ಶಾಂತ ಕಸ್ತೂರಿ ನೆರವೇರಿಸಿದರು. ಕಾರ್ಯಕ್ರಮದಕ್ಕಿಂತ ಮುನ್ನ ಭಾರತ ಸಂವಿಧಾನ ಪೀಠಿಕೆಯನ್ನು ಸಮಾಜ ಕಲ್ಯಾಣ ಅಧಿಕಾರಿ ಮಂಜುಳಾ ಹಿರೇಮನಿ ಓದಿದರು.