ಸಂವಿಧಾನ ಭಾರತೀಯರೆಲ್ಲರ ಬದುಕಿನ ದಿಕ್ಸೂಚಿ

ಕಲಬುರಗಿ,ಡಿ.7-ನಮ್ಮ ಸಂವಿಧಾನವು ಕೇವಲ ಒಂದು ಗ್ರಂಥವಲ್ಲ, ಅದು ನಮ್ಮ ಬದುಕಿನ ದಿಕ್ಸೂಚಿ ಎಂದು ಕೆಕೆಆರ್‍ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ.ಅಜಯ್ ಧರ್ಮಸಿಂಗ್ ಸಿಂಗ್ ಹೇಳಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ವೇದಿಕೆಯ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಡಾ.ಅಂಬೇಡ್ಕರ್ ಅವರು ಭಾರತಕ್ಕೆ ಸಂವಿಧಾನ ಸೇರಿದಂತೆ ದೇಶಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು.
ಡಾ.ಅಂಬೇಡ್ಕರ್ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದಿರಬಹುದು, ಆದರೆ ಅವರು ರೂಪಿಸಿಕೊಟ್ಟ ಸಂವಿಧಾನದ ರೂಪದಲ್ಲಿ ನಮ್ಮ ಬದುಕಿನಲ್ಲಿ ಎಂದಿಗೂ ಜೀವಂತವಾಗಿ ಇರುತ್ತಾರೆ, ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸುವ ಭದ್ರ ಬುನಾದಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.