
ಅಫಜಲಪುರ: ಗರ್ಭಿಣಿಯರು ಸೇವಿಸುವ ಪೌಷ್ಟಿಕ ಆಹಾರವು ಗರ್ಭದಲ್ಲಿರುವ ಮಗುವಿನ ಆರೋಗ್ಯಕರ ಬೆಳವಣಿಗೆಗೆ ಸಂಜೀವಿನಿಯಿದ್ದಮತೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ ಮಹಿಳೆಯರು ಪೌಷ್ಟಿಕ ಆಹಾರ ಸೇವಿಸುವುದರ ಜೊತೆಗೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸಬೇಕು ಎಂದು ಹೋಲಿ ಕ್ರಾಸ್ ಸರ್ವೋದಯ ಸಮಾಜ ಸೇವಾ ಸಂಸ್ಥೆಯ ಸಂಯೋಜಕ ಫಾದರ್ ವಿಲಿಯಂ ಸೆಲ್ವರಾಜ್ ಹೇಳಿದರು.
ತಾಲೂಕಿನ ಅಳ್ಳಗಿ. ಬಿ ಗ್ರಾಮದಲ್ಲಿರುವ ಐದು ಅಂಗನವಾಡಿ ಕೇಂದ್ರಗಳು ಸೇರಿಸಿ ನಾಲ್ಕನೇ ಅಂಗನವಾಡಿ ಕೇಂದ್ರದಲ್ಲಿ ಹೋಲಿ ಕ್ರಾಸ್ ಸರ್ವೋದಯ ಸಮಾಜ ಸೇವಾ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಪೆÇೀಷಣ ಅಭಿಯಾನದ ಮಾತೃಪೂರ್ಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತರಕಾರಿ ಮತ್ತು ಹಣ್ಣುಗಳು ಪ್ರಕೃತಿ ನೀಡಿರುವ ಅಮೂಲ್ಯ ಕೊಡುಗೆಗಳಾಗಿವೆ. ಗರ್ಭಿಣಿಯರು ಇವುಗಳನ್ನು ತಮ್ಮ ಆಹಾರದಲ್ಲಿ ನಿಯಮಿತವಾಗಿ ಸೇವಿಸಬೇಕು. ಆಗಾಗ ವೈದ್ಯರ ಸಲಹೆ ಪಡೆಯುತ್ತಿರಬೇಕು. ಗರ್ಭಾವಸ್ಥೆಯಲ್ಲಿ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಸಂಸ್ಥೆಯ ಸಿಬ್ಬಂದಿ ಬಸಮ್ಮ ಬಾಸಗಿ ಮಾತನಾಡಿ ಪೆÇ್ರೀಟೀನ್ಯುಕ್ತ ಕಾಳುಗಳನ್ನು ನೆನೆಸಿ ಮೊಳಕೆ ಬರಿಸಿ ಸೇವಿಸುವುದರಿಂದ ದೇಹಕ್ಕೆ ಪೌಷ್ಟಿಕಾಂಶ ದೊರೆಯುತ್ತದೆ. ಪ್ರತಿಯೊಬ್ಬ ಗರ್ಭಿಣಿಯೂ ತಾಯಿ ಕಾರ್ಡ್ ಮಾಡಿಸಿಕೊಳ್ಳಬೇಕು. ಪ್ರತಿ ತಿಂಗಳು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಒಂಬತ್ತು ಗರ್ಭಿಣಿಯರಿಗೆ ಸೀಮಂತ ನೆರವೇರಿಸಿ ಉಡಿ ತುಂಬುವ ಕಾರ್ಯಕ್ರಮ ನಡೆಸಲಾಯಿತು. ಸಿಬ್ಬಂದಿ ಸಿದ್ದು ನಾಟೀಕಾರ ಮಾತನಾಡಿ, ಹೋಲಿ ಕ್ರಾಸ್ ಸರ್ವೋದಯ ಸಮಾಜ ಸೇವಾ ಸಂಸ್ಥೆಯು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗೊಂಡಿರುವ ಸಾಮಾಜಿಕ ಸೇವೆ ಮತ್ತು ಮಹಿಳೆಯರಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪೆÇ್ರೀತ್ಸಾಹಿಸುತ್ತಿರುವ ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಹೆಣ್ಣುಮಕ್ಕಳಿಗೆ ಉಚಿತವಾಗಿ ನೀಡುತ್ತಿರುವ ಹೊಲಿಗೆ ತರಬೇತಿಯ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಗ್ರಾಮದ ಆಶಾ ಕಾರ್ಯಕರ್ತೆಯರು ಇದ್ದರು.




















