Home ಜಿಲ್ಲೆ ಕಲಬುರಗಿ “ನಿರಂತರ ಕಲಿಕೆ, ನಾವೀನ್ಯತೆ ಮತ್ತು ಸಾಮಾಜಿಕಜವಾಬ್ದಾರಿ ವಿದ್ಯಾರ್ಥಿಗಳಿಗೆ ಅಗತ್ಯ”: ರಾಜ್ಯಪಾಲ

“ನಿರಂತರ ಕಲಿಕೆ, ನಾವೀನ್ಯತೆ ಮತ್ತು ಸಾಮಾಜಿಕಜವಾಬ್ದಾರಿ ವಿದ್ಯಾರ್ಥಿಗಳಿಗೆ ಅಗತ್ಯ”: ರಾಜ್ಯಪಾಲ

ಕಲಬುರಗಿ,ಏ.23:”ಜ್ಞಾನ ಮತ್ತು ತಂತ್ರಜ್ಞಾನ ವೇಗವಾಗಿ ಬದಲಾಗುತ್ತಿರುವ ಯುಗದಲ್ಲಿ ವಿದ್ಯಾರ್ಥಿಗಳಿಗೆ ನಿರಂತರವಾಗಿ ಕಲಿಯುವ ಸಾಮಥ್ರ್ಯ, ನಾವೀನ್ಯತೆಯ ಮನಸ್ಥಿತಿ ಮತ್ತು ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆ ಅತ್ಯಗತ್ಯವಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರಗಿ ಘಟಿಕೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರೊಂದಿಗೆ ಭಾಗವಹಿಸಿ ಅವರು ಮಾತನಾಡಿದರು. “ವಿದ್ಯಾರ್ಥಿಗಳು ಜ್ಞಾನವನ್ನು ವೈಯಕ್ತಿಕ ಯಶಸ್ಸಿಗೆ ಮಾತ್ರವಲ್ಲದೆ ಸಮಾಜ ಮತ್ತು ರಾಷ್ಟ್ರದ ಉನ್ನತಿಗಾಗಿಯೂ ಬಳಸಬೇಕು” ಎಂದರು.

” ಪ್ರಸ್ತುತ ಭಾರತ ಜಾಗತಿಕ ವೇದಿಕೆಯಲ್ಲಿ ಉದಯೋನ್ಮುಖ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ನಮ್ಮ ದೇಶದ ಯುವ ಶಕ್ತಿ ನಮ್ಮ ದೊಡ್ಡ ಆಸ್ತಿ. “ಸ್ವಾವಲಂಬಿ ಭಾರತ”ವನ್ನು ನಿರ್ಮಿಸುವಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮುಖ್ಯವಾಗಿದೆ. ಎಲ್ಲಿಗೆ ಹೋದರೂ, ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡಿದರೂ, ಶ್ರೇಷ್ಠತೆ, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವವು ಯುವಜನತೆಯ ಮಾರ್ಗದರ್ಶಿ ತತ್ವಗಳಾಗಿರಲಿ” ಎಂದು ಹೇಳಿದರು.

“ಗುಣಮಟ್ಟದ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಯ ಮೂಲಕ ದೇಶದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆಗಳನ್ನು ನೀಡಿದೆ. ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿ, ಬಹುಶಿಸ್ತೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ ಮತ್ತು ಈ ವಿಶ್ವವಿದ್ಯಾಲಯವು ಈ ದಿಕ್ಕಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂಬ ವಿಶ್ವಾಸವಿದೆ” ಎಂದು ಭರವಸೆ ವ್ಯಕ್ತಪಡಿಸಿದರು.

“ಪರಿಸರ ಸಂರಕ್ಷಣೆ ಅಭಿವೃದ್ಧಿಯμÉ್ಟೀ ಮುಖ್ಯವಾಗಿದೆ. ಯುವಪೀಳಿಗೆ ಸುಸ್ಥಿರ ಅಭಿವೃದ್ಧಿಯ ತತ್ವಗಳನ್ನು ಅಳವಡಿಸಿಕೊಂಡು, ಪ್ರಕೃತಿಗೆ ಸಂವೇದನಾಶೀಲರಾಗಿ ಮತ್ತು ಜವಾಬ್ದಾರಿಯುತ ನಾಗರಿಕರಾಗಬೇಕು. “ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ” ಅಂದರೆ, ಒಬ್ಬ ವ್ಯಕ್ತಿಗೆ ತನ್ನ ಕೆಲಸವನ್ನು ಮಾಡುವ ಹಕ್ಕಿದೆ, ಆದರೆ ಅದರ ಫಲಿತಾಂಶಗಳ ಬಗ್ಗೆ ಚಿಂತಿಸಬಾರದು. ಸರಳವಾಗಿ ಹೇಳುವುದಾದರೆ, ನಿಮ್ಮ ಕೆಲಸವನ್ನು ಸಂಪೂರ್ಣ ಸಮರ್ಪಣೆಯಿಂದ ಮಾಡಿ ಮತ್ತು ಫಲಿತಾಂಶಗಳ ಬಗ್ಗೆ ಚಿಂತಿಸಬೇಡಿ. ಈ ದಿನ ಪದವಿ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಯು ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳೊಂದಿಗೆ ಸಜ್ಜಾಗಿದ್ದಾರೆ. ಆ ಜ್ಞಾನವನ್ನು ಸಮಾಜದ ಕಲ್ಯಾಣಕ್ಕಾಗಿ ಉಪಯೋಗಿಸಿಕೊಳ್ಳಿ” ಎಂದು ಕರೆ ನೀಡಿದರು.

ಈ ವೇಳೆ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಸೇರಿದಂತೆ ಮುಂತಾದ ಗಣ್ಯರು ಹಾಜರಿದ್ದರು.