Home ಜಿಲ್ಲೆ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ..

ಫ್ರೀಡಂ ಪಾರ್ಕಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ..

ಬೆಂಗಳೂರು, ಮಾ. ೭- ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘ ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಂದು ಫ್ರೀಡಂ ಪಾರ್ಕಿನಲ್ಲಿ ಸುಮಾರು ೧೦ ಸಾವಿರ ಗುತ್ತಿಗೆದಾರರ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಗಮಿಸಿ ಒಂದು ದಿನದ ಸಾಂಕೇತಿಕ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿದರೂ ಸರ್ಕಾರ ಕಳೆದ ಎರಡು ವರ್ಷಗಳಿಂದ ಬಾಕಿ ಹಣ ಬಿಡುಗಡೆ ಮಾಡಿಲ್ಲ..ಗುತ್ತಿಗೆದಾರರು ಸಂಕಷ್ಟ ಎದುರಿಸುತ್ತಿದರೆ.


ಕರ್ನಾಟಕದಲ್ಲಿ ಸುಮಾರು ೧.೫ ಲಕ್ಷ ಅಧಿಕೃತ ನೋಂದಣಿ ಪಡೆದ ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರು ಇದ್ದು, ಕಳೆದ ಮೂರು ವರ್ಷಗಳಿಂದ ವಿವಿಧ ಇಲಾಖೆಗಳ ಮೂಲಕ ಕಾಮಗಾರಿಗಳನ್ನು ಪೂರ್ಣಗೊಳಿಸಿದರೂ ಬಾಕಿ ಹಣ ಬಿಡುಗಡೆ ಆಗಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘ ಆರೋಪಿಸಿದೆ. ೨೦೨೧-೨೨, ೨೦೨೨-೨೩ ಹಾಗೂ ೨೦೨೩-೨೪ ಹಣಕಾಸು ವರ್ಷಗಳಲ್ಲಿ ಪೂರ್ಣಗೊಂಡ ಕಾಮಗಾರಿಗಳ ಬಾಕಿ ಮೊತ್ತ ಡಿಸೆಂಬರ್ ೨೦೨೫ರ ವೇಳೆಗೆ ಸುಮಾರು ೩೭,೦೦೦ ಕೋಟಿ ಆಗಿದೆ ಎಂದು ಸಂಘದ ಅಧ್ಯಕ್ಷರು ಹೇಳಿದರು.


ಬಾಕಿ ಹಣ ಬಿಡುಗಡೆ ವಿಳಂಬವಾಗಿರುವುದರಿಂದ ಗುತ್ತಿಗೆದಾರರು ಬ್ಯಾಂಕ್ ಸಾಲ ತೀರಿಸಲು, ಕಾರ್ಮಿಕರಿಗೆ ವೇತನ ಪಾವತಿಸಲು ಹಾಗೂ ಕುಟುಂಬ ನಿರ್ವಹಣೆಗೆ ಸಂಕಷ್ಟ ಎದುರಿಸುತ್ತಿದ್ದಾರೆ. ಇದರಿಂದ ರಾಜ್ಯಾದ್ಯಂತ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೂ ವ್ಯತ್ಯಯ ಉಂಟಾಗಿದೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗುತ್ತಿಗೆದಾರರಿಗೆ ಯಾವುದೇ ವಿಶೇಷ ಅನುಕೂಲವಾಗಿಲ್ಲ ಹಿಂದಿನ ಸರ್ಕಾರಕ್ಕಿಂತಲೂ ಕೆಲ ಇಲಾಖೆಗಳಲ್ಲಿನ ಕಮಿಷನ್ ಪ್ರಮಾಣ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ.


ಟೆಂಡರ್‌ಗಳನ್ನು ಪ್ಯಾಕೇಜ್ ರೂಪದಲ್ಲಿ ನೀಡುವುದರಿಂದ ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಅನಾನುಕೂಲವಾಗುತ್ತಿದೆ. ಕೆಲವು ಇಲಾಖೆಗಳು ಟೆಂಡರ್ ಪ್ರಕ್ರಿಯೆಯಲ್ಲಿ ಬಲಿಷ್ಠ ಗುತ್ತಿಗೆದಾರರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿವೆ ಎಂದು ಆರೋಪಿಸಿದರು.ಇನ್ನೂ ಜಿಬಿಎ ವ್ಯಾಪ್ತಿಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ ಮಂಜುನಾಥ್ ಮಾತಾನಾಡಿ ಜಿಬಿಎ ವ್ಯಾಪ್ತಿಯಲ್ಲೂ ಭದ್ರತಾ ಠೇವಣಿಯಾಗಿ ಶೇ.೧೦ರಷ್ಟು ಕತ್ತರಿಸಿದ ಹಣವನ್ನು ಐದು ವರ್ಷವಾದರೂ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ತುರ್ತಾಗಿ ಗುತ್ತಿಗೆದಾರರೊಂದಿಗೆ ಸಭೆ ನಡೆಸಿ ಬಾಕಿ ಹಣ ಬಿಡುಗಡೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಗುತ್ತಿಗೆದಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.