
ಜೇವರಗಿ,ಏ 17: ಬಸವ ಜಯಂತಿಯನ್ನು ಅದ್ದೂರಿಯಾಗಿ ಅಚರಿಸಲು ಎಲ್ಲರ ಸಹಕಾರ ಅಗತ್ಯ ಎಂದು ಬಸವ ಜಯಂತಿ ಉತ್ಸವ ಸಮಿತಿ ಜಿಲ್ಲಾಧ್ಯಕ್ಷ ಶಾಸಕ ಬಿ.ಆರ್.ಪಾಟೀಲ ಹೇಳಿದರು.
ಪಟ್ಟಣದ ವಿಜಯಪುರ ರಸ್ತೆಯ ಗುರುಕುಲ ಶಾಲೆಯ ಆವರಣದಲ್ಲಿ ನಡೆದ ಬಸವಜಯಂತಿ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಯಂತ್ಯುತ್ಸವದಲ್ಲಿ ಬಸವಣ್ಣನವರ ಭಾವಚಿತ್ರ ಹೊರತುಪಡಿಸಿ ಬೇರೆ ಭಾವಚಿತ್ರ ಬಳಸಬಾರದು. ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲ್ಲೂಕುಗಳಿಂದ 5 ಸಾವಿರಕ್ಕೂ ಹೆಚ್ಚು ಬಸವಾಭಿಮಾನಿಗಳು ಜಯಂತ್ಯುತ್ಸವದಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.ಜಯಂತ್ಯುತ್ಸವಸಮಿತಿ ಗೌರವಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಅಮರನಾಥ ಪಾಟೀಲ, ಕೆಕೆಆರ್‍ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ರವೀಂದ್ರ ಶಾಬಾದಿ, ಆರ್.ಜಿ.ಶೆಟಗಾರ, ಸೋಮಶೇಖರ ಹಿರೇಮಠ, ಷಣ್ಮುಖಪ್ಪ ಹಿರೇಗೌಡ, ರಾಜಶೇಖರ ಸೀರಿ, ಇತರರು ಭಾಗವಹಿಸಿದ್ದರು




















