Home ಜಿಲ್ಲೆ ಶೈಕ್ಷಣಿಕ ಅಭಿವೃದ್ಧಿಗಾಗಿ ಎಲ್ಲ ನೌಕರರ ಸಹಕಾರ ಅವಶ್ಯಕ

ಶೈಕ್ಷಣಿಕ ಅಭಿವೃದ್ಧಿಗಾಗಿ ಎಲ್ಲ ನೌಕರರ ಸಹಕಾರ ಅವಶ್ಯಕ

ನವಲಗುಂದ,ಮೇ22 : ತಾಲ್ಲೂಕಿನಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಎಲ್ಲ ನೌಕರರು ಸಹಕಾರ ಅವಶ್ಯಕವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ ನಾಗಪ್ಪ ಕಂಬೋಗಿ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲ್ಲೂಕು ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಸರ್ಕಾರಿ ನೌಕರರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ದೃಷ್ಟಿಯಿಂದ ಸಂಘದಿಂದ ಮುಂಬರುವ ದಿನಗಳಲ್ಲಿ ನೌಕರರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು, ಕ್ರೀಡಾ ಚಟುವಟಿಕೆಗಳನ್ನು ಹಾಗೂ ಸಮಾಜಮುಖಿ ಕಾರ್ಯವಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸುವಂತೆ ಕರೆ ನೀಡಿದರು.

?ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ವಿ.ಡಿ.ರಂಗಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿ ತಾಲ್ಲೂಕಿಗೆ ನೂತನವಾಗಿ ಆಗಮಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿ ಅವರ ಅಧಿಕಾರಾವಧಿಯಲ್ಲಿ ತಾಲೂಕಿನ ಶಿಕ್ಷಣ ಕ್ಷೇತ್ರವು ಮತ್ತಷ್ಟು ಪ್ರಗತಿ ಹೊಂದಲಿ ಹಾಗೂ ನೌಕರರ ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವಂತಾಗಲಿ. ಇಲಾಖೆಯ ಎಲ್ಲಾ ಶೈಕ್ಷಣಿಕ ಕಾರ್ಯಗಳಿಗೆ ಸಂಘವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಸಂಘದ ಕಾರ್ಯದರ್ಶಿ ಎಲ್.ವಾಯ್. ರಾಯಪ್ಪನವರ, ಕೋಶಾಧ್ಯಕ್ಷ ಎನ್.ವಾಯ್.ಕಳಸಾಪೂರ, ಸಾಂಸ್ಕೃತಿಕ ಕಾರ್ಯದರ್ಶಿ ಬಸವರಾಜ ಹೂಗಾರ, ಸಂಘಟನಾ ಕಾರ್ಯದರ್ಶಿ ದೀಪಕ್ ಮುತಾಲಿಕದೇಸಾಯಿ, ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಆರ್ ಎಚ್.ನೇಗಲಿ ಸೇರಿ ವಿವಿಧ ಇಲಾಖೆಯ ನೌಕರರು ಇದ್ದರು.