ಔರಾದ್:ಜು.೨: ಕರ್ನಾಟಕ-ಮಹಾರಾಷ್ಟ್ರ-ತೆಲಂಗಾಣ ರಾಜ್ಯಗಳ ಗಡಿ ಭಾಗಗಳಲ್ಲಿ ನಡೆಯುವ ಅಪರಾಧ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಪೊಲೀಸ್ ಇಲಾಖೆಗಳ ನಡುವೆ ನಿರಂತರ ಸಮನ್ವಯ, ತ್ವರಿತ ಮಾಹಿತಿ ವಿನಿಮಯ ಹಾಗೂ ಜಂಟಿ ಕಾರ್ಯಾಚರಣೆ ಅತ್ಯಗತ್ಯ ಎಂದು ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾAವೆ ಅಭಿಪ್ರಾಯಪಟ್ಟರು.
ಬೀದರ್ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಭಾಲ್ಕಿ ಉಪವಿಭಾಗದ ಆಶ್ರಯದಲ್ಲಿ ಬುಧವಾರ ಔರಾದ್ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರ ರಾಜ್ಯ ಗಡಿ ಅಪರಾಧ ಸಮನ್ವಯ ಸಭೆಯಲ್ಲಿ ಮಾತನಾಡಿದರು.
ಬೀದರ್ ಜಿಲ್ಲೆ ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳ ಗಡಿಯನ್ನು ಹೊಂದಿರುವುದರಿAದ, ಗಡಿ ಪ್ರದೇಶಗಳಲ್ಲಿ ಅಪರಾಧಿಗಳು ರಾಜ್ಯದ ಗಡಿ ದಾಟಿ ತಪ್ಪಿಸಿಕೊಳ್ಳುವ ಪ್ರಕರಣಗಳು, ಕಳ್ಳತನ, ಮನೆಗಳ್ಳತನ, ವಾಹನ ಕಳವು, ಜಾನುವಾರು ಕಳ್ಳತನ, ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಸಾಗಣೆ, ಅಕ್ರಮ ಮರಳು ಸಾಗಣೆ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಮೂರು ರಾಜ್ಯಗಳ ಪೊಲೀಸ್ ಇಲಾಖೆಗಳ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯ ಅವಶ್ಯಕವಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಅಪರಾಧ ನಡೆದ ತಕ್ಷಣ ಸಂಬAಧಿಸಿದ ಪೊಲೀಸ್ ಠಾಣೆಗಳು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಆರೋಪಿಗಳ ಚಲನವಲನ, ಶಂಕಿತರ ವಿವರಗಳು, ಕಳುವಾದ ವಾಹನಗಳು ಹಾಗೂ ಇತರ ಅಪರಾಧ ಪ್ರಕರಣಗಳ ಮಾಹಿತಿಯನ್ನು ತ್ವರಿತವಾಗಿ ಹಂಚಿಕೊಳ್ಳುವುದರಿAದ ಅಪರಾಧಿಗಳನ್ನು ಶೀಘ್ರ ಬಂಧಿಸಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಗಡಿ ಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸುವುದು, ಜಂಟಿ ವಾಹನ ತಪಾಸಣೆ ನಡೆಸುವುದು, ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಬಲಪಡಿಸುವುದು, ಸಿಸಿಟಿವಿ ಕ್ಯಾಮೆರಾಗಳ ಬಳಕೆಯನ್ನು ವಿಸ್ತರಿಸುವುದು ಹಾಗೂ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅಪರಾಧ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.
ಅಲ್ಲದೆ, ವಿವಿಧ ರಾಜ್ಯಗಳ ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಅಪರಾಧಗಳ ಮಾಹಿತಿ, ತನಿಖೆಯ ಪ್ರಗತಿ ಹಾಗೂ ಅಪರಾಧ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದರು. ಗಡಿ ಭಾಗಗಳಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಎಲ್ಲ ಇಲಾಖೆಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಸಭೆಯಲ್ಲಿ ಹುಮನಾಬಾದ್ ಡಿವೈಎಸ್ಪಿ ಮಡೋಳಪ್ಪ, ಮಹಾರಾಷ್ಟ್ರದ ಉದಗೀರ ಪೊಲೀಸ್ ಇನ್‌ಸ್ಪೆಕ್ಟರ್ ಜಗಾನಂದ ಬಟವಾಡೆ, ನಿಲಂಗಾ ಡಿವೈಎಸ್ಪಿ ವಿಶಾಲ ಎಸ್. ಧೂಮೆ, ದೇಗಲೂರ ಡಿವೈಎಸ್ಪಿ ಕಿರಣ ಪೋಪುಲಘಾಟ್, ತೆಲಂಗಾಣದ ನಾರಾಯಣಖೇಡ ಡಿವೈಎಸ್ಪಿ ಜೆ. ವೆಂಕಟರಡ್ಡಿ ಸಭೆಯಲ್ಲಿ ಗಡಿ ಭಾಗದ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊAಡು, ಭವಿಷ್ಯದಲ್ಲಿ ಅಪರಾಧ ನಿಯಂತ್ರಣಕ್ಕಾಗಿ ಇನ್ನಷ್ಟು ಪರಿಣಾಮಕಾರಿ ಸಮನ್ವಯ ವ್ಯವಸ್ಥೆ ರೂಪಿಸುವ ಕುರಿತು ಸಲಹೆಗಳನ್ನು ನೀಡಿದರು.
ಮಹಾರಾಷ್ಟ್ರದ ಶಾಜನಿ ಔರಾದ್ ಪೊಲೀಸ್ ಇನ್‌ಸ್ಪೆಕ್ಟರ್ ಎಚ್.ಪಿ. ಬಾಗಾರ್, ಕಾಸರ ಸಿರ್ಸಿ ಪೊಲೀಸ್ ಇನ್‌ಸ್ಪೆಕ್ಟರ್ ಪಿ.ಎ. ಗರ್ಜೆ, ದೇವಣಿ ಪೊಲೀಸ್ ಇನ್‌ಸ್ಪೆಕ್ಟರ್ ಎ.ಪಿ. ಕೊಡವಾದ, ಪೊಲೀಸ್ ಇನ್‌ಸ್ಪೆಕ್ಟರ್ ಆರ್.ಜಿ. ಚವ್ಹಾಣ, ಉದಗೀರ ಗ್ರಾಮೀಣ ಪೊಲೀಸ್ ಇನ್‌ಸ್ಪೆಕ್ಟರ್ ಡಿ.ಡಿ. ಗಡೆ, ಔರಾದ್ ಸಿಪಿಐ ರಘುವೀರಸಿಂಗ್ ಠಾಕೂರ್, ಕಮಲನಗರ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಮೇಹೆಕರ್ ಪಿಎಸ್‌ಐ ಸುದರ್ಶನ ರಡ್ಡಿ, ಸಂತಪೂರ ಪಿಎಸ್‌ಐ ದಿನೇಶ್ ಎಂ.ಪಿ., ಕಮಲನಗರ ಪಿಎಸ್‌ಐ ಆಶಾ ರಾಠೋಡ್, ಹೋಕ್ರಣಾ ಪಿಎಸ್‌ಐ ಉಷಾಬಾಯಿ, ಉದಗೀರ ಎಸ್‌ಡಿಪಿಒ ಟಿ.ಎಂ. ಮಮಕಾರ, ಬೀದರ ಗ್ರಾಮೀಣ ಪೊಲೀಸ್ ಠಾಣೆಯ ಮಹೇಶ್ ಪಾಟೀಲ್ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.































