
ಗದಗ, ಜೂ೭: ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಪ್ರತಿಷ್ಠಿತ ಶಾಲೆಗಳಿಗೆ ಆಯ್ಕೆಯಾಗಿರುವ ಪರಿಶಿಷ್ಟ ವರ್ಗದ ಬಾಲಕಿಯರಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೌನ್ಸೆಲಿಂಗ್ ಕಾರ್ಯಕ್ರಮವನ್ನು ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ವಿದ್ಯಾರ್ಥಿನಿಯರು ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ಭವಿಷ್ಯದ ಗುರಿಗಳಿಗೆ ಅನುಗುಣವಾಗಿ ಸೂಕ್ತ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲು ನೆರವಾಗುವ ಉದ್ದೇಶದಿಂದ ಈ ಕೌನ್ಸೆಲಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ನಂದಾ ಹಣಬರಟ್ಟಿಯವರು, ಡಯಟ್ ಉಪ ಪ್ರಾಂಶುಪಾಲ ಜಿ.ಎಂ. ಮುಂದಿನಮನಿಯವರು, ಉಪನಿರ್ದೇಶಕರ ಕಚೇರಿಯ ಎಂ.ಎಚ್. ಸವದತ್ತಿಯವರು ಸೇರಿದಂತೆ ವಿವಿಧ ಪ್ರತಿಷ್ಠಿತ ಶಾಲೆಗಳ ಪ್ರಾಂಶುಪಾಲರು ಭಾಗವಹಿಸಿದ್ದರು.
ಗದಗದ ರಾಜರಾಜೇಶ್ವರಿ ಹುಲಕೋಟಿ ಶಾಲೆ, ಮಹಾವೀರ ಜೈನ್ ಶಾಲೆ, ಚಿಕ್ಕಟ್ಟಿ ಶಾಲೆ ಹಾಗೂ ಲಕ್ಷೆ÷್ಮÃಶ್ವರದ ಚಂದನ್ ಸ್ಕೂಲ್‌ನ ಪ್ರಾಂಶುಪಾಲರು ವಿದ್ಯಾರ್ಥಿನಿಯರಿಗೆ ತಮ್ಮ ಶಾಲೆಗಳ ಶೈಕ್ಷಣಿಕ ಸೌಲಭ್ಯಗಳು, ವಿಶೇಷ ಕಾರ್ಯಕ್ರಮಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಇರುವ ಅವಕಾಶಗಳು ಹಾಗೂ ಉನ್ನತ ಶಿಕ್ಷಣದ ಮಾರ್ಗಗಳ ಕುರಿತು ಮಾಹಿತಿ ನೀಡಿದರು.
ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಕೇವಲ ಶಾಲೆಯ ಹೆಸರು ಅಥವಾ ಖ್ಯಾತಿಯನ್ನು ಆಧರಿಸಿ ಆಯ್ಕೆ ಮಾಡದೆ, ತಮ್ಮ ಆಸಕ್ತಿ, ಪ್ರತಿಭೆ ಹಾಗೂ ವೃತ್ತಿಜೀವನದ ಕನಸುಗಳಿಗೆ ಹೊಂದಿಕೆಯಾಗುವ ಶಿಕ್ಷಣ ಸಂಸ್ಥೆಯನ್ನು ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಉತ್ತಮ ಶಿಕ್ಷಣವು ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಪ್ರಮುಖ ಸಾಧನವಾಗಿದ್ದು, ಲಭಿಸಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಉನ್ನತ ಗುರಿಗಳನ್ನು ಸಾಧಿಸಬೇಕೆಂದು ಕರೆ ನೀಡಿದರು.
ಈ ವೇಳೆ ವಿದ್ಯಾರ್ಥಿನಿಯರು ಹಾಗೂ ಪಾಲಕರು ವಿವಿಧ ಶಾಲೆಗಳ ಬಗ್ಗೆ ತಮ್ಮ ಸಂದೇಹಗಳನ್ನು ಕೇಳಿ ಪರಿಹಾರ ಪಡೆದುಕೊಂಡರು. ಕೌನ್ಸೆಲಿಂಗ್ ಮೂಲಕ ವಿವಿಧ ಶಾಲೆಗಳ ವೈಶಿಷ್ಟ÷್ಯಗಳು ಮತ್ತು ಲಭ್ಯವಿರುವ ಶೈಕ್ಷಣಿಕ ಅವಕಾಶಗಳ ಬಗ್ಗೆ ಸಮಗ್ರ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಹೆಚ್ಚು ಆತ್ಮವಿಶ್ವಾಸದಿಂದ ಶಾಲೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.


























