ನಟ ದರ್ಶನ್‌ಗೆ ತಿಂಗಳಿಗೊಮ್ಮೆ ಬಟ್ಟೆ,ಹೊದಿಕೆ ಒದಗಿಸಲು ಕೋರ್ಟ್ ಆದೇಶ

ಡಬಲ್‌ಶಾಕ್

ಬೆಂಗಳೂರು,ಅ.೨೯-ಹಾಸಿಗೆ, ದಿಂಬು ಕೇಳಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್‌ಗೆ ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ ೫೭ನೇ ಸಿಸಿಹೆಚ್ ಕೋರ್ಟ್ ಆದೇಶಿಸಿ ಡಬಲ್‌ಶಾಕ್ ನೀಡಿದೆ.


ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್‌ನಿಂದ ಮುಖ್ಯ ಸೆಲ್‌ಗೆ ವರ್ಗಾವಣೆ ಕೋರಿದ ವಿಚಾರಕ್ಕೆ ಸಂಬಂಧಿಸಿದಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಅವಕಾಶ ನೀಡಿದೆ.


ರೇಣುಕಾಸ್ವಾಮಿ ಪ್ರಕರಣದ ವಿಚಾರಣೆ ಕೋರಿದ ಎಸ್‌ಪಿಪಿ ಅರ್ಜಿಯನ್ನು ಕೋರ್ಟ್ ಮಾನ್ಯ ಮಾಡಿ ಇದೇ ಅ.೩೧ ರಂದು ದೋಷಾರೋಪ ನಿಗದಿಗೆ ಕೋರ್ಟ್ ಸೂಚನೆ ನೀಡುವ ಮೂಲಕ ದರ್ಶನ್‌ಗೆ ಡಬಲ್ ಶಾಕ್ ಕೊಟ್ಟಿದೆ.


ದರ್ಶನ್ ಮತ್ತು ಪವಿತ್ರ ಗೌಡ ಸೇರಿದಂತೆ ೬ ಜನ ಆರೋಪಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಹಾಜರಾಗಿದ್ದರೆ ಉಳಿದ ಆರೋಪಿಗಳು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದರು.


ದರ್ಶನ್ ಅರ್ಜಿ ವಿವರ:


ನನ್ನನ್ನು ಕ್ವಾರಂಟೈನ್ ಸೆಲ್‌ನಲ್ಲೇ ಇರಿಸಲಾಗಿದೆ. ಬಿಸಿಲು ಬೀಳದ ಜಾಗದಲ್ಲಿ ವಾಕಿಂಗ್‌ಗೆ ಅವಕಾಶ ನೀಡಲಾಗಿದೆ. ಇದರಿಂದ ನನ್ನ ಆರೋಗ್ಯದಲ್ಲಿ ಮತ್ತಷ್ಟು ವ್ಯತ್ಯಾಸವಾಗಿದೆ. ಈ ಹಿಂದೆ ನ್ಯಾಯಾಲಯವು ನೀಡಿದ್ದ ಆದೇಶಕ್ಕೂ ಜೈಲಿನ ಅಧಿಕಾರಿಗಳು ಬೆಲೆ ನೀಡುತ್ತಿಲ್ಲ


ಜೈಲಿನಲ್ಲಿ ಕನಿಷ್ಠ ಮೂಲ ಸೌಲಭ್ಯಗಳನ್ನೂ ನೀಡುತ್ತಿಲ್ಲ. ಬ್ಯಾರಕ್‌ನಿಂದ ಹೊರಗೆ ಬರುವುದಕ್ಕೂ ಬಿಡುತ್ತಿಲ್ಲ. ಮೈಮೇಲೆ ಬಿಸಿಲು ಬಿದ್ದು ಹಲವು ದಿನಗಳೇ ಆಗಿವೆ. ಕೈಯಲ್ಲಿ ಫಂಗಸ್ ಕಾಣಿಸಿಕೊಂಡಿದೆ. ನಾನು ಬೆನ್ನು ನೋವಿನಿಂದ ಬಳಲುತ್ತಿದ್ದೇನೆ. ಹೀಗಾಗಿ ತಲೆ ದಿಂಬು, ಬೆಡ್ ಶೀಟ್, ಹಾಸಿಗೆ ನೀಡುವಂತೆ ದರ್ಶನ್ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು.