ಯಾದಗಿರಿ:ಜು.೨: ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗದAತೆ ಎಸ್‌ಐಆರ್ (Sಠಿeಛಿiಚಿಟ Iಟಿಣeಟಿsive ಖevisioಟಿ) ಪ್ರಕ್ರಿಯೆ ಕುರಿತು ಮನೆಮನೆಗೆ ತೆರಳಿ ಸ್ಪಷ್ಟ ಹಾಗೂ ಮನಮುಟ್ಟುವ ರೀತಿಯಲ್ಲಿ ಮಾಹಿತಿ ನೀಡಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಕರೆ ನೀಡಿದರು.
ಎಸ್‌ಐಆರ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ಬುಧವಾರ ನಗರದ ವಾರ್ಡ್ ಸಂಖ್ಯೆ ೬ರಿಂದ ೧೧ರವರೆಗಿನ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದ ಅವರು, ಬೂತ್ ಅಧ್ಯಕ್ಷರು, ಬಿಎಲ್‌ಎ-೨ ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿರುವ ಅರ್ಹರ ಹೆಸರುಗಳು ಯಾವುದೇ ಕಾರಣಕ್ಕೂ ಅಳಿಸಿಹೋಗದಂತೆ ವಿಶೇಷ ಕಾಳಜಿ ವಹಿಸಬೇಕು. ಪಕ್ಷದ ಬೆಂಬಲಿಗರು ಹಾಗೂ ಪ್ರಮುಖ ಮತದಾರರ ಹೆಸರುಗಳು ಅದೇ ಮತಗಟ್ಟೆಯಲ್ಲಿ ಯಥಾಸ್ಥಿತಿಯಲ್ಲಿ ಉಳಿಯುವಂತೆ ನಿರಂತರವಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಎಸ್‌ಐಆರ್ ಪ್ರಕ್ರಿಯೆ ವೇಳೆ ಪ್ರತಿಯೊಬ್ಬ ಮತದಾರನಿಗೂ ಅಗತ್ಯ ದಾಖಲೆಗಳು, ಪರಿಶೀಲನಾ ವಿಧಾನ ಹಾಗೂ ಹೆಸರು ಪಟ್ಟಿಯಲ್ಲಿ ಉಳಿಸಿಕೊಳ್ಳುವ ಬಗ್ಗೆ ಸಮಗ್ರ ಮಾಹಿತಿ ನೀಡಿ ಜಾಗೃತಿ ಮೂಡಿಸುವಂತೆ ಅವರು ಕಾರ್ಯಕರ್ತರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ಪ್ರಧಾನ ಕಾರ್ಯದರ್ಶಿ ಪರಶುರಾಮ ಕುರುಕುಂದಿ, ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಮಂಜುನಾಥ ಜಡಿ, ಕಾಶಿರಾವ್ ಚಿರಸಾಗರ, ಸಾಬು ಚಂಡ್ರಿಕಿ, ರಮಾದೇವಿ, ಶ್ರೀ ಚನ್ನವೀರಯ್ಯ ಸ್ವಾಮಿ, ಬಸವರಾಜ ಹೊಸಮನಿ, ಗುರುನಾಥ ಶಾಬಾದಿ, ಶೈಪಾನ್ ಚಾಹುಸ್, ಕರಣ್ ಸುಮ್ರು ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





























