
ಜೇವರ್ಗಿ: ಸೆ.3:ಭೀಮಾ ನದಿಯಲ್ಲಿ ಬಂದ ಮೊಸಳೆಯನ್ನು ತಾಲ್ಲೂಕಿನ ಮುಲ್ಲಾ ಬಿ ಗ್ರಾಮಸ್ಥರು ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.ಭಾನುವಾರ ಸಂಜೆ ಗ್ರಾಮದಲ್ಲಿ ದಿಢೀರ್ ಪ್ರತ್ಯಕ್ಷವಾದ ಮೊಸಳೆಯನ್ನು ಗ್ರಾಮದ ಯುವಕರಾದ ಭೀಮಪ್ಪ ಪೂಜಾರಿ, ಯಲ್ಲಪ್ಪ ಅಂಕಲಗಿ, ಬಾಲಚಂದ್ರ, ಯಲ್ಲಪ್ಪ ಹಾಗೂ ಗ್ರಾಮಸ್ಥರು ಎಲ್ಲರೂ ಕೂಡಿಕೊಂಡು ಮೊಸಳೆ ರಕ್ಷಿಸಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಅಧಿಕಾರಿಗಳಿಗೆ ಮೊಸಳೆ ಹಸ್ತಾಂತರ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ‘ಮಹಾರಾಷ್ಟ್ರ-ದಲ್ಲಿ ಹೆಚ್ಚು ಮಳೆಯಾದ ಪರಿಣಾಮ ಉಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟಿದ್ದರಿಂದ ಮೊಸಳೆಗಳು ಹರಿದು ಬಂದಿವೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು’ ಎಂದು ಸೂಚನೆ ನೀಡಿದ್ದಾರೆ.