Home ಜಿಲ್ಲೆ ಬೆಳೆ ನಷ್ಟ: ಪರಿಹಾರ ಒದಗಿಸಲು ಉಪಗ್ರಹ ದತ್ತಾಂಶ ಹಾಗೂ ಜಂಟಿ ಕ್ಷೇತ್ರ ಸಮೀಕ್ಷೆ

ಬೆಳೆ ನಷ್ಟ: ಪರಿಹಾರ ಒದಗಿಸಲು ಉಪಗ್ರಹ ದತ್ತಾಂಶ ಹಾಗೂ ಜಂಟಿ ಕ್ಷೇತ್ರ ಸಮೀಕ್ಷೆ

ಗದಗ, ಆ೨೨: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆಯ ವ್ಯತ್ಯಯ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಬೆಳೆಗಳು ಎದುರಿಸುತ್ತಿರುವ ಹಿನ್ನಡೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ‘ಮಧ್ಯ ಋತು ಸಂಕಷ್ಟ’ ನಿಯಮಾವಳಿಗಳನ್ನು ಜಾರಿಗೊಳಿಸುವ (iಟಿvoಞe) ಕುರಿತು ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಒದಗಿಸಲು ಉಪಗ್ರಹ ದತ್ತಾಂಶ ಹಾಗೂ ಜಂಟಿ ಕ್ಷೇತ್ರ ಸಮೀಕ್ಷೆಗೆ ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಮುಂಗಾರು ಹಂಗಾಮಿನ ಬೆಳೆಗಳಿಗೆ ‘ಮಧ್ಯ ಋತು ಸಂಕಷ್ಟ’ ಜಾರಿ ಕುರಿತು ಜಿಲ್ಲಾ ಮಟ್ಟದ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಪ್ರಸಕ್ತ ಮುಂಗಾರು ಋತುವಿನಲ್ಲಿ ಎದುರಾಗಿರುವ ಪ್ರಕೃತಿ ವಿಕೋಪ ಹಾಗೂ ಬರದಂತಹ ಹವಾಮಾನ ಪರಿಸ್ಥಿತಿಯಿಂದಾಗಿ ರೈತರ ಬೆಳೆಗಳು ತೀವ್ರ ಹಾನಿಗೊಳಗಾಗಿವೆ. ಆದ್ದರಿಂದ ರೈತರಿಗೆ ಶೀಘ್ರವಾಗಿ ಆರ್ಥಿಕ ನೆರವು ಕಲ್ಪಿಸಲು ‘ಮಿಡ್ ಸೀಸನ್ ಅಡ್ವರ್ಸಿಟಿ’ ನಿಯಮದಡಿ ಪರಿಹಾರ ಕಲ್ಪಿಸುವುದು ಅಗತ್ಯವಾಗಿದೆ. “ಮಳೆ ಅಭಾವ ಅಥವಾ ದೀರ್ಘಕಾಲದ ಒಣ ಹವೆಯಿಂದಾಗಿ ಶೇ. ೫೦ ಕ್ಕಿಂತ ಹೆಚ್ಚು ಬೆಳೆ ನಷ್ಟ ಉಂಟಾಗಿರುವ ಸಾಧ್ಯತೆ ಇರುವ ಪ್ರದೇಶಗಳನ್ನು ನಿಖರವಾಗಿ ಗುರುತಿಸಬೇಕು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಮಾರ್ಗದರ್ಶಿ ಸೂತ್ರಗಳನ್ವಯ ರೈತರಿಗೆ ಶೇ. ೨೫ ರಷ್ಟು ಮುಂಗಡ ಮಧ್ಯಂತರ ಪರಿಹಾರ ತಲುಪಿಸಲು ಅಗತ್ಯ ಕ್ರಮ ವಹಿಸಬೇಕು” ಎಂದು ಸಂಬAಧಪಟ್ಟ ಅಧಿಕಾರಿಗಳು ಮತ್ತು ವಿಮಾ ಸಂಸ್ಥೆಗಳು ತಕ್ಷಣವೇ ಜಂಟಿ ಕ್ಷೇತ್ರ ಪರಿಶೀಲನೆ ನಡೆಸಿ, ನಿಯಮಾವಳಿಗಳಂತೆ ವರದಿ ಸಲ್ಲಿಸಬೇಕು” ಎಂದು ಅಧಿಕಾರಿಗಳಿಗೆ ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳಿಗೆ ಸೂಚಿಸಿದರು.

ಬೆಳೆಗಳ ಬೆಳವಣಿಗೆ ಹಾಗೂ ತೇವಾಂಶದ ಕೊರತೆಯನ್ನು ನಿಖರವಾಗಿ ವಿಶ್ಲೇಷಿಸಲು ಓಆಗಿI, ಓಆWI ಮತ್ತು ಕೆ.ಎಸ್.ಎನ್.ಎಂ.ಡಿ.ಸಿ ಯ ಮಳೆ ಆಧಾರಿತ ಉಪಗ್ರಹ ದತ್ತಾಂಶಗಳನ್ನು ಬಳಸಿಕೊಳ್ಳಲು ತೀರ್ಮಾನಿಸಲಾಯಿತು. ಜಂಟಿ ಕ್ಷೇತ್ರ ಸಮೀಕ್ಷೆ ನಡೆಸಲು ವಿಮಾ ಕಂಪನಿ, ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡವು ಬಾಧಿತ ಕೃಷಿ ಕ್ಷೇತ್ರಗಳಲ್ಲಿ ಪ್ರತ್ಯಕ್ಷ ಪರಿಶೀಲನೆ ನಡೆಸಿ ಶೀಘ್ರ ವರದಿ ಸಲ್ಲಿಸಲು ನಿರ್ದೇಶಿಸಿದರು.

ಬೆಳೆ ಕೊಯ್ಲು ಮುಕ್ತಾಯಗೊಳ್ಳುವ ಮುನ್ನವೇ ಎಂ.ಎಸ್.ಎ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ರೈತರಿಗೆ ನ್ಯಾಯಯುತ ಪರಿಹಾರ ಸಿಗುವಂತೆ ನೋಡಿಕೊಳ್ಳಲು ಸೂಚಿಸಲಾಯಿತು.

ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ್ ಅವರು ಮಾತನಾಡಿ, “ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ಹಾಗೂ ಇತರ ಬೆಳೆಗಳ ಪ್ರಸ್ತುತ ಸ್ಥಿತಿಗತಿಯನ್ನು ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ. ಎನ್.ಡಿ.ವಿ.ಐ ಹಾಗೂ ತೇವಾಂಶ ಸೂಚಿ ಆಧಾರಿತ ಮಾಹಿತಿಗಳನ್ನು ಪರಿಶೀಲಿಸಿ, ಎಂ.ಎಸ್.ಎ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸಕ್ರಿಯಗೊಳಿಸಬಹುದಾದ ಬೆಳೆ ನಿಯೋಜಿತ ಘಟಕಗಳನ್ನು ಗುರುತಿಸಲಾಗುತ್ತಿದೆ,” ಎಂದು ಮಾಹಿತಿ ನೀಡಿದರು.
ಇದಲ್ಲದೆ, ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ, ಯಾವುದೇ ಅರ್ಹ ರೈತರು ಯೋಜನೆಯ ಸೌಲಭ್ಯದಿಂದ ವಂಚಿತರಾಗದAತೆ ಎಚ್ಚರವಹಿಸಬೇಕು ಎಂದು ಅವರು ಮನವಿ ಮಾಡಿದರು.

ಕೃಷಿ ಇಲಾಖೆಯು ಕಂದಾಯ ಮತ್ತು ವಿಮಾ ಕಂಪನಿಗಳೊAದಿಗೆ ಒಗ್ಗೂಡಿ ಹಾನಿಯ ಪ್ರಮಾಣವನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಲಿದೆ. ನೋಂದಾಯಿತ ಅರ್ಹ ರೈತರಿಗೆ ನಿಯಮಾನುಸಾರ ವಿಮಾ ಸೌಲಭ್ಯ ದೊರಕಿಸಲು ಇಲಾಖೆ ಬದ್ಧವಾಗಿದೆ” ಎಂದು ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಬೆಳೆಗಳ ಪ್ರಸ್ತುತ ಸ್ಥಿತಿಗತಿ ಹಾಗೂ ರೈತರಿಗೆ ವಿಮಾ ಯೋಜನೆಯಡಿ ತಕ್ಷಣದ ಮಧ್ಯಂತರ ಪರಿಹಾರ ಒದಗಿಸುವ ಕುರಿತು ವಿಸ್ತöÈತವಾಗಿ ಚರ್ಚಿಸಲಾಯಿತು.

ಈ ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಕೆ.ಎಸ್.ಎನ್.ಎಂ.ಡಿ.ಸಿ ಪ್ರತಿನಿಧಿಗಳು ಹಾಗೂ ವಿಮಾ ಕಂಪನಿಯ ಹಿರಿಯ ಅಧಿಕಾರಿಗಳು ಹಾಜರಿದ್ದರು.