Home ಜಿಲ್ಲೆ ಕಲಬುರಗಿ ಸಿಯುಕೆ: ಮೂವರು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಪದವಿ

ಸಿಯುಕೆ: ಮೂವರು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಪದವಿ

ಕಲಬುರಗಿ,ಜು.21: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (ಸಿಯುಕೆ) ಯಶಸ್ವಿಯಾಗಿ ಮೂವರು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧದ ಕಾರ್ಯವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ರಸಾಯನ ಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಮತ್ತು ಮಾನವಿಕತೆ ಮತ್ತು ಭಾಷಾ ವಿಭಾಗದ ಮೂವರು ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿಯನ್ನು ಪ್ರದಾನ ಮಾಡಿ ಘೋಷಿಸಿದೆ.
ಶ್ವೇತಾ ಅವರು ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದು
Cysteine Rich Peptides Derived From Marine cone Snails
ಎಂಬ ವಿಷಯದ ಮೇಲೆ ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ. ಪದವಿಯನ್ನು ಪಡೆದಿದ್ದಾರೆ. ಇವರು ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಕೊನಕಲ್ಲು ಹನುಮೇಗೌಡ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಕೈಗೊಂಡಿದ್ದರು.
ವೆಂಕಟಾ ಬಾಬುರಾವ ಅವರು ಕಂಪ್ಯೂಟರ್ ಸೈನ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದು,Bilingual Scene Text Detection Language Identification and Recognition of words and Characters in Natural Images
ಎಂಬ ವಿಷಯದ ಮೇಲೆ ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ. ಪದವಿಯನ್ನು ಪಡೆದಿದ್ದಾರೆ. ಇವರು ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಗುರುರಾಜ ಮುಕರಂಬಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಕೈಗೊಂಡಿದ್ದರು.
ಬುಲ್ತಿ ಸರಕಾರ್ ಅವರು ವಿದೇಶಿ ಭಾಷಾ ಅಧ್ಯಯನದ ಅರೇಬಿಕ್ ಭಾಷಾ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದು
Secular Humanism in the Select works of Gibran Khalil Gibran with Special Reference to The Broken Wings, The Prophet, The Madman and The Earth Gods
ಎಂಬ ವಿಷಯದ ಮೇಲೆ ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ. ಪದವಿಯನ್ನು ಪಡೆದಿದ್ದಾರೆ. ಇವರು ವಿದೇಶಿ ಭಾಷಾ ಅಧ್ಯಯನ ಅರೇಬಿಕ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಇನಾಮುಲ್ ಅಜಾದ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಕೈಗೊಂಡಿದ್ದರು.
ಸಂದರ್ಭದಲ್ಲಿ ಸಿಯುಕೆ ವಿಶ್ವವಿದ್ಯಾಲಯದ ಕುಲಪತಿಗಳಾದ ಪೆÇ್ರ. ಬಟ್ಟು ಸತ್ಯನಾರಾಯಣ ಅವರು ಪಿ.ಹೆಚ್.ಡಿ ಪದವಿ ಪಡೆದ ಮೂವರು ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಅವರ ಮಾರ್ಗದರ್ಶಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅವರ ಮುಂದಿನ ಶೈಕ್ಷಣಿಕ ಮತ್ತು ವೃತ್ತಿಪರ ಜೀವನದಲ್ಲಿ ಇನ್ನಷ್ಟು ಯಶಸ್ಸು ದೊರೆಯಲೆಂದು ಈ ಸಂದರ್ಭದಲ್ಲಿ ಶುಭ ಹಾರೈಸಿದ್ದಾರೆ.