
ಕಲಬುರಗಿ,ನ.11: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕೇಂದ್ರ ಗ್ರಂಥಾಲಯವು ಓದುವ ಹವ್ಯಾಸವನ್ನು ಬೆಳೆಸುವುದು ಹಾಗೂ ಗ್ರಂಥಾಲಯದ ಸಂಪನ್ಮೂಲಗಳು ಮತ್ತು ಸೇವೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನವೆಂಬರ್ 16ರಿಂದ 18ರವರೆಗೆ ಮೂರು ದಿನಗಳ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಆಚರಿಸಲಿದೆ.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳು ಮತ್ತು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಅವು ಕೇಂದ್ರ ಗ್ರಂಥಾಲಯದ ಡಾ. ಎಸ್. ಆರ್. ರಂಗನಾಥನ್ ಸಭಾಂಗಣದಲ್ಲಿ ನಡೆಯಲಿವೆ. ಈ ಕಾರ್ಯಕ್ರಮಗಳ ಅಂಗವಾಗಿ ಸಿದ್ಧಪಡಿಸಲಾದ ಪೆÇೀಸ್ಟರ್ ಅನ್ನು ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಮತ್ತು ಕುಲಸಚಿವ ಪೆÇ್ರ. ಆರ್. ಆರ್. ಬಿರಾದಾರ್ ಅವರು ಜಂಟಿಯಾಗಿ ಬಿಡುಗಡೆ ಮಾಡಿದರು.
ಓದುವ ಸಂಸ್ಕøತಿ, ಶಿಕ್ಷಣ, ಸಂಶೋಧನೆ, ಜ್ಞಾನ ಪ್ರಸಾರ ಹಾಗೂ ನಿರಂತರ ಕಲಿಕೆಯನ್ನು ಉತ್ತೇಜಿಸುವಲ್ಲಿ ಗ್ರಂಥಾಲಯಗಳ ಮಹತ್ವದ ಪಾತ್ರವನ್ನು ಸಾರುವ ಉದ್ದೇಶದಿಂದ ಪ್ರತಿ ವರ್ಷ ನವೆಂಬರ್ 14ರಿಂದ 20ರವರೆಗೆ ದೇಶಾದ್ಯಂತ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಆಚರಿಸಲಾಗುತ್ತದೆ. ಗ್ರಂಥಾಲಯಗಳಲ್ಲಿ ಲಭ್ಯವಿರುವ ವಿವಿಧ ಸಂಪನ್ಮೂಲಗಳು ಮತ್ತು ಸೇವೆಗಳ ಕುರಿತು ಹಾಗೂ ಶೈಕ್ಷಣಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಗ್ರಂಥಾಲಯಗಳು ವಹಿಸುವ ಪಾತ್ರದ ಬಗ್ಗೆ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ಆಚರಣೆಯ ಪ್ರಮುಖ ಉದ್ದೇಶವಾಗಿದೆ.
ಈ ಆಚರಣೆಯ ಅಂಗವಾಗಿ ಕೇಂದ್ರ ಗ್ರಂಥಾಲಯವು ಮೂರು ಪ್ರಮುಖ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. ನವೆಂಬರ್ 16ರಂದು ಪದವಿ, ಸ್ನಾತಕೋತ್ತರ ಮತ್ತು ಪಿಎಚ್.ಡಿ. ವಿದ್ಯಾರ್ಥಿಗಳಿಗಾಗಿ ‘ಲೈಬ್ರರಿ ಇನ್ಸ್ಟಾಗ್ರಾಮ್ ರೀಲ್ಸ್’ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ನವೆಂಬರ್ 17ರಂದು ‘ಪಿಕ್ ಅಂಡ್ ಟಾಕ್’ ಹಾಗೂ ನವೆಂಬರ್ 18ರಂದು ‘ಲೈಬ್ರರಿ ಟ್ರೆಷರ್ ಹಂಟ್’ ಸ್ಪರ್ಧೆಗಳು ನಡೆಯಲಿದ್ದು, ಈ ಎರಡೂ ಸ್ಪರ್ಧೆಗಳಲ್ಲಿ ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಬಹುದಾಗಿದೆ.
ಈ ಚಟುವಟಿಕೆಗಳು ಓದುವ ಹವ್ಯಾಸವನ್ನು ಬೆಳೆಸುವುದು, ಗ್ರಂಥಾಲಯದ ಸಂಪನ್ಮೂಲಗಳು ಮತ್ತು ಸೇವೆಗಳ ಪರಿಣಾಮಕಾರಿ ಬಳಕೆಯನ್ನು ಪೆÇ್ರೀತ್ಸಾಹಿಸುವುದು ಹಾಗೂ ಶೈಕ್ಷಣಿಕ ಮತ್ತು ಸಂಶೋಧನಾ ಉತ್ಕೃಷ್ಟತೆಯನ್ನು ಉತ್ತೇಜಿಸುವಲ್ಲಿ ಗ್ರಂಥಾಲಯಗಳ ಮಹತ್ವದ ಪಾತ್ರದ ಕುರಿತು ಅರಿವು ಮೂಡಿಸುವ ಗುರಿಯನ್ನು ಹೊಂದಿವೆ. ಈ ಮೂರು ದಿನಗಳ ಕಾರ್ಯಕ್ರಮಗಳು ವಿದ್ಯಾರ್ಥಿಗಳು, ಬೋಧಕರು ಮತ್ತು ಸಿಬ್ಬಂದಿಗೆ ಗ್ರಂಥಾಲಯದ ಸಂಪನ್ಮೂಲಗಳನ್ನು ಸೃಜನಾತ್ಮಕವಾಗಿ ಬಳಸಿಕೊಳ್ಳಲು ಉತ್ತಮ ವೇದಿಕೆಯಾಗುವುದರ ಜೊತೆಗೆ ವಿಶ್ವವಿದ್ಯಾಲಯದಲ್ಲಿ ಓದುವ ಸಂಸ್ಕೃತಿಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ.
ಪೆÇೀಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕ ಡಾ. ಪಿ. ಎಸ್. ಕಟ್ಟಿಮನಿ, ಕಾನೂನು ಅಧ್ಯಯನ ಹಾಗೂ ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪೆÇ್ರ. ಬಸವರಾಜ ಎಂ. ಕುಬಕಡ್ಡಿ, ಸಹಾಯಕ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನ ಹೂಗಾರ, ಸಹಾಯಕ ಗ್ರಂಥಪಾಲಕ ಡಾ. ಜಿ. ಜೆ. ಪಿ. ದೀಕ್ಷಿತ್, ವೃತ್ತಿಪರ ಸಹಾಯಕ ರಾಜಕುಮಾರ್ ಕಲ್ಯಾಣಿ, ರಾಜೇಶ್ ಸಿ. ದಾಸ್ ಹಾಗೂ ಗ್ರಂಥಾಲಯದ ಸಿಬ್ಬಂದಿಗಳಾದ ಬಸವರಾಜ ಯಾದವಾಡ, ನಿಂಗಣ್ಣ ಎಂ. ಜಿ., ಶ್ರೀ ಪ್ರಕಾಶ ಎಸ್. ಎನ್., ಸಾಗರ ಕಬಾಡೆ, ಸತೀಶ್ ಕುಮಾರ್ ಮತ್ತು ಶಿವಕುಮಾರ್ ಜಿ. ಉಪಸ್ಥಿತರಿದ್ದರು.





















