
ಬೀದರ್:ನ.೧೯: ವಿದ್ಯಾರ್ಥಿಗಳು ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಶರಣಪ್ಪ ಎಸ್. ಮಲಗೊಂಡ ಸಲಹೆ ಮಾಡಿದರು.
ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿಜಿಟಲ್ ತಂತ್ರಜ್ಞಾನದ ಬಳಕೆಯಿಂದ ಮಕ್ಕಳಲ್ಲಿ ಅಧ್ಯಯನ ಆಸಕ್ತಿ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಗ್ರಂಥಗಳು ಜ್ಞಾನ ವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ವಿಶೇಷ ಉಪನ್ಯಾಸ ನೀಡಿದ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಡಾ. ಹಾಲಪ್ಪಗೋಳ್ ಪೃಥ್ವಿರಾಜ್ ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಲು ಗ್ರಂಥಗಳ ಅಧ್ಯಯನ ಅವಶ್ಯಕ ಎಂದು ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಜೈಶೀಲಾ ತಿಳಿಸಿದರು.
ಪುಸ್ತಕ ಓದಿ ಜೀವನದಲ್ಲಿ ಯಶಸ್ವಿಯಾದ ಮಹಾನ್ ವ್ಯಕ್ತಿಗಳ ಕುರಿತು ಡಾ. ನವರಂಗ ಮಾತನಾಡಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸಂಜೀವಕುಮಾರ ಅಪ್ಪೆ ನಿರೂಪಿಸಿದರು. ಹಿರಿಯ ಗ್ರಂಥಪಾಲಕ ಡಾ. ರಾಜಕುಮಾರ ಟಿ. ಸ್ವಾಗತಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ ಡಾ. ಮಮತಾ ವಂದಿಸಿದರು.
























