
ಕಲಬುರಗಿ:ಜ.22: ನಿಜಶರಣ ಅಂಬಿಗರ ಚೌಡಯ್ಯನವರಂತೆ ಮಹಾತ್ಮರ ತತ್ವಾದರ್ಶಗಳನ್ನು ಬೆಳೆಸಿಕೊಂಡು ಎದೆಯಲ್ಲಿ ಡಾ.ಅಂಬೇಡ್ಕರ್ ಅವರ ಸಂವಿಧಾನ ಮುಂದಿಟ್ಟುಕೊಂಡು ಶಿಕ್ಷಣ ಪಡೆದುಕೊಳ್ಳಬೇಕು ಎಂದು ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ನಿರ್ದೇಶಕ ಎಚ್.ಟಿ.ಪೆÇೀತೆ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಕೋಲಿ ಸಮುದಾಯದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 906 ನೆಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಷ್ಪಾರ್ಚನೆ ಮಾಡಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದರು.
12 ನೆಯ ಶತಮಾನದ ನಿಜಶರಣ ಅಂಬಿಗರ ಚೌಡಯ್ಯ ಅವರು ಕ್ರಾಂತಿಕಾರಿ ಸ್ವಾಭಿಮಾನಿಗಳಾಗಿದ್ದರು. ಅವರಂತೆಯೇ ಇಂದು ಶಿಕ್ಷಣ ಪಡೆದು ಅರಿವು ಪಡೆದುಕೊಳ್ಳಬೇಕಾಗಿದೆ. ಶಿಕ್ಷಣದಿಂದಲೇ ಸಮಾಜದ ಅಭಿವೃದ್ಧಿ, ಮೀಸಲಾತಿ ಹಕ್ಕು ಸಿಗಲಿವೆ ಎಂದು ಅಭಿಪ್ರಾಯಪಟ್ಟರು. ಅಂಬಿಗರ ಚೌಡಯ್ಯ ಅವರು ನಿಮ್ನ ಶೋಷಿತರ ಪರವಾಗಿ ಹೋರಾಟ ಮಾಡಿದ್ದವರು. ಅಸ್ಪೃಶ್ಯತೆ ಕಂಡು ಬೇಸತ್ತು ಹೋಗಿದ್ದ ಚೌಡಯ್ಯ ನವರದ್ದು ಬಹುದೊಡ್ಡ ವ್ಯಕ್ತಿತ್ವ ಎಂದು ಪ್ರತಿಪಾದಿಸಿದರು.
ಸಂವಿಧಾನದ ಹೆಸರಿನಲ್ಲಿ ದೇಶ ನಡೆಸುತ್ತಿದ್ದಾರೆ, ಆದರೆ ಸಂವಿಧಾನ ದಿನೇ ದಿನೇ ಕ್ಷೀಣಿಸುತ್ತಿದೆ. ಅದರ ಬಗ್ಗೆ ಜಾಗೃತರಾಗಬೇಕಿದೆ ಎಂದ ಅವರು ಒಂದು ವೇಳೆ ಸಂವಿಧಾನ ಇರಲಿಲ್ಲ ಅಂದರೆ ಹೆಣ್ಣುಮಕ್ಕಳು ಯಾರೂ ಕೂಡ ವೇದಿಕೆಯ ಮೇಲೆ ಇರುತ್ತಿರಲಿಲ್ಲ. ಸಂವಿಧಾನ ಕೊಟ್ಟಿರುವ ಇಂತಹ ಹಕ್ಕುಗಳು ಸಮುದಾಯದ ಉಳಿವಿಗಾಗಿ ಬಳಸಿಕೊಳ್ಳಿ ಎಂದರು.
ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಅಂಬಿಗರ ಚೌಡಯ್ಯನವರ ಅಭಿವೃದ್ಧಿ ನಿಗಮ ಸ್ಥಾಪಿಸಿ, ಅದಕ್ಕೆ 300 ಕೋಟಿ ಅನುದಾನ ನೀಡುವಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು, ಮಾತಾ ಮಣಿಕೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಮಾಡಲಾಗಿದೆ. ಇದಕ್ಕೆ ಸೂಕ್ತ ಅನುದಾನ ನೀಡಬೇಕು, ಕೋಲಿ ಸಮುದಾಯವನ್ನು ಎಸ್.ಟಿ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ಕೋಲಿ ಸಮುದಾಯಕ್ಕೆ ಎಸ್.ಟಿ ಪಟ್ಟಿಗೆ ಸೇರ್ಪಡೆ ಕುರಿತಾಗಿ ಮುಖ್ಯಮಂತ್ರಿಗಳಿಗೆ ನಿಯೋಗ ಹೋಗಿದ್ದೇವೆ. ಶೀಘ್ರದಲ್ಲೇ ಎಸ್.ಟಿ ಗೆ ಸೇರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಭಾರತ ಸಂವಿಧಾನ ಸಂಸತ್ತು ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆ ಮುಂಚೆ ಸುಮಾರು 7 ಶತಮಾನಗಳ ಮೊದಲೆ ಮುನ್ನಡಿ ಬರೆದವರು ನಿಜಶರಣ ಅಂಬಿಗರ ಚೌಡಯ್ಯ ಅವರ ಆದರ್ಶಗಳು ಮೌಲ್ಯಗಳು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು.
ಸುಲಫಲ ಮಠದ ಸಾರಂಗಧಾರ ದೇಶಿಕೇಂದ್ರದ ಮಹಾಸ್ವಾಮೀಜಿ, ಮಲ್ಲಣ್ಣಪ್ಪ ಮುತ್ಯಾ ತೋನಸನಳ್ಳಿ ಸಾನಿಧ್ಯ ವಹಿಸಿ ಮಾತನಾಡಿದರು.
ಪ್ರತಿಭಾವಂತ ಮಕ್ಕಳಿಗೆ ಲ್ಯಾಪ್ ಟಾಪ್, ಅಂಗವಿಕಲ ಮಕ್ಕಳಿಗೆ ತ್ರಿಚಕ್ರ ಸೈಕಲ್ ವಿತರಿಸಲಾಯಿತು.
ಸಮಾಜದ ಮುಖಂಡರಾದ ಬಸವರಾಜ ಬೂದಿಹಾಳ ಅವರು ಪ್ರಸ್ತಾವಿಕ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಸಿ ಅವರು ಸ್ವಾಗತಿಸಿದರು. ಶಿವಾನಂದ ಅಣಜಗಿ ನಿರೂಪಿಸಿದರು.
ಇದಕ್ಕೂ ಮುನ್ನ ವಚನ ಗ್ರಂಥ ಹಾಗೂ ಅಂಬಿಗರ ಚೌಡಯ್ಯನವರ ಮೂರ್ತಿಗೆ ಹೆಲಿಕ್ಯಾಪ್ಟರ್ ಮೂಲಕ ಬಿ.ಫೌಜಿಯಾ ತರನ್ನುಮ್, ಪೋಲಿಸ್ ನಗರ ಆಯುಕ್ತ ಶರಣಪ್ಪ ಎಸ್.ಡಿ. ಎಸ್.ಪಿ. ಅಡ್ಡರೂ ಶ್ರೀನಿವಾಸ, ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ಸೇರಿದಂತೆ ಅನೇಕ ಗಣ್ಯರು ಪುμÁ್ಪರ್ಚನೆ ಮಾಡಲಾಯಿತು. ಪಾಲಿಕೆಯ ಆವರಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿμÁ್ಠಪನೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ವಿವಿಧ ವಾಧ್ಯ, ಗೊಂಬೆಗಳ ಪ್ರದರ್ಶನ, ನಾಸಿಕ ಡೋಲ್, ಜನಪದ ಕಲಾ ತಂಡಗಳು, ಹುಲಿ ಕುಣಿತ ಸೇರಿದಂತೆ ವಿವಿಧ ವೇಷಧಾರಿಗಳ ಮೂಲಕ ನಡೆಯುವ ಮೆರವಣಿಗೆಯು ಡಾ.ಎಸ್.ಎಂ.ಪಂಡಿತ್ ರಂಗಮಂದಿರಕ್ಕೆ ತಲುಪಿದವು.
ಮುಖಂಡ ಬಸವರಾಜ ಬೂದಿಹಾಳ ಅವರು ಪ್ರಸ್ತಾವಿಕ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಸಿ ಅವರು ಸ್ವಾಗತಿಸಿದರು. ಶಿವಾನಂದ ಅಣಜಗಿ ನಿರೂಪಿಸಿದರು.
ಬಸವರಾಜ್ ಬಳ್ಳಾರಿ ಭಾರತ ನಾಟ್ಯ ಪ್ರದರ್ಶಿಸಿ ಗಮನ ಸೆಳೆದರು. ಬಸವರಾಜ ಶೃಂಗೇರಿ ಹಾಗೂ ಅವರ ತಂಡದಿಂದ ನಾಡಗೀತೆ ಪ್ರಸ್ತುತ ಪಡಿಸಲಾಯಿತು.
ಮಹಾನಗರ ಪಾಲಿಕೆ ಮಹಾಪೌರರಾದ ವರ್ಷಾಜಾನೆ,ಬಿ.ಜಿ ಪಾಟೀಲ್, ಶಶೀಲ್ ನಮೋಶಿ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್, ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್, ಕುಡಾ ಅಧ್ಯಕ್ಷ ಮಝಹರ್ ಖಾನ್ ಆಲಂ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಮೋಹನಕುಮಾರ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಾಯಿಬಣ್ಣ ನೀಲಪ್ಪಗೊಳ, ರವಿರಾಜ್ ಕೊರವಿ, ರಮೇಶ್ ನಾಟಿಕಾರ್, ಶಿವಾನಂದ ಹೊನಗುಂಟಿ, ಅಶೋಕ ವೀರನಾಯಕ, ಲಚ್ಚಪ್ಪ ಜಮಾದಾರ್, ಅಂಬು ಡಿಗ್ಗಿ, ಬಸವರಾಜ ಗುಂಡಲಗೇರಿ, ಶ್ಯಾಮರಾವ್ ಸುಲ್ತಾನಪುರ, ಶಾಂತಪ್ಪ ಕೂಡಿ, ವಿಜಯಕುಮಾರ್ ಹದಗಲ್, ಶಿವಶರಣಪ್ಪ ಕೋಬಾಳ, ಅನುಪಮಾ ಕಮಕನೂರು, ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ, ಅವ್ವಣ್ಣ ಮ್ಯಾಕೇರಿ, ವಾಣಿ ಸಗರಕರ, ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಜಯಪ್ರಕಾಶ ಕಮಕನೂರ ಸೇರಿದಂತೆ ಹಲವರು ಇದ್ದರು.
























