
ಔರಾದ್,ಡಿ.೨ : ಪಟ್ಟಣದ ಶ್ರೀ ದತ್ತ ಸಾಯಿ ಶನೇಶ್ವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದು ಸಾಯಂಕಾಲ ೫ ಗಂಟೆಗೆ ಸಾಂಸ್ಕೃತಿಕ ಉತ್ಸವ ಹಾಗೂ ಶ್ರೀ ಗುರು ಪ್ರಶಸ್ತಿ ಪ್ರದಾನ ಜರುಗಲಿದೆ ಎಂದು ಪೂಜ್ಯ ಶಂಕರಲಿAಗ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ದತ್ತ ಜಯಂತಿ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಪಟ್ಟಣದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ನೃತ್ಯ, ನಾಟಕ, ಜಾನಪದ, ಹಾಸ್ಯ ಸಂಗೀತ ಸೇರಿದಂತೆ ಹಲವು ಸ್ಪರ್ಧೆಗಳು ಜರುಗಲಿದೆ.
ಅತ್ಯುತ್ತಮ ಪ್ರದರ್ಶನ ನೀಡಿದ ತಂಡಕ್ಕೆ ಪ್ರಥಮ ೧೧೦೦೦, ದ್ವಿತೀಯ ೭೦೦೦, ತೃತೀಯ ೫೦೦೦ ನಗದು ಬಹುಮಾನದ ಜೊತೆಗೆ ಪಾರಿತೋಷಕ ನೀಡಲಾಗುವುದು ಹಾಗೂ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಶ್ರೀ ಗುರು ಪ್ರಶಸ್ತಿ ನೀಡಿ ಗೌರವಿಸಲಾಗುವುದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ.

























