
ಬೆಂಗಳೂರು,ಫೆ.೧೫-ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ನವ ದಂಪತಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಯಲಹಂಕದ ಚೌಡೇಶ್ವರಿ ಲೇಔಟ್‌ನಲ್ಲಿ ನಡೆದಿದೆ.
ಬಾಗೇಪಲ್ಲಿ ಮೂಲದ ಕೃಷ್ಣಮ್ಮ-ರಾಜು ದಂಪತಿ ಗಾಯಗೊಂಡಿದ್ದು,ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಸ್ಥಿತಿ ಚಿಂತಾಜನಕವಾಗಿದೆ.
ಯಲಹಂಕದ ಚೌಡೇಶ್ವರಿ ಲೇಔಟ್‌ನ ಮನೆಯಲ್ಲಿ ಇಂದು ಬೆಳಗ್ಗೆ ೬ ಗಂಟೆ ಸುಮಾರಿಗೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡಿದೆ.
ಸ್ಫೋಟ ಹೇಗಾಯಿತು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಬೆಳಗ್ಗೆ ಗ್ಯಾಸ್ ಹಚ್ಚುವಾಗ ಅಥವಾ ಲೈಟ್ ಆನ್ ಮಾಡಿದಾಗ ಗ್ಯಾಸ್ ಸಂಭವಿಸಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಸ್ಪೋಟದ ತೀವ್ರತೆಗೆ ಮನೆಗೋಡೆಯ ಒಂದು ಭಾಗವೇ ಛಿದ್ರವಾಗಿದೆ. ಬಾಗೇಪಲ್ಲಿ ಕೃಷ್ಣಮ್ಮ-ರಾಜು ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.




























