Home ಮುಖಪುಟ ಸುದ್ದಿ ಸಿಲಿಂಡರ್ ಸ್ಫೋಟ: ಇಬ್ಬರ ಸಾವು

ಸಿಲಿಂಡರ್ ಸ್ಫೋಟ: ಇಬ್ಬರ ಸಾವು

ಹುಬ್ಬಳ್ಳಿ,ಸೆ.೨೦- ಅಡುಗೆ ಅನಿಲ (ಗ್ಯಾಸ್) ಲೀಕ್ ಆಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಹಳೆ ಹುಬ್ಬಳ್ಳಿಯ ಅಯೋಧ್ಯಾ ನಗರದಲ್ಲಿ ನಡೆದಿದೆ.


?ಪ್ರವೀಣ್ ಕಲಾಲ್ (೪೬) ಮತ್ತು ಮೋಹನ್ ಕಲಾಲ್ (೪೦) ಮೃತಪಟ್ಟ ದುರ್ದೈವಿಗಳು. ಪ್ರವೀಣ್ ಕಲಾಲ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ತೀವ್ರವಾಗಿ ಗಾಯಗೊಂಡಿದ್ದ ಮೋಹನ್ ಕಲಾಲ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಸುಮನ ಕಲಾಲ್ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


?ಮೃತ ಪ್ರವೀಣ್ ಕಲಾಲ್ ಅವರು ಕೆಇಬಿ ಉದ್ಯೋಗಿಯಾಗಿದ್ದರು ಎನ್ನಲಾಗಿದೆ.ಗ್ಯಾಸ್ ಲೀಕೇಜ್‌ನಿಂದಾಗಿ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಈ ಕುರಿತು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.