Home ಜಿಲ್ಲೆ ಕಲಬುರಗಿ ವಿಶ್ವ ಮಹಿಳಾದಿನದಂದು ಸಿಲಿಂಡರ್ ಬೆಲೆ ಏರಿಕೆ: ಇದು ಅಚ್ಚೇ‌ದಿನ್- ಕೇಂದ್ರದ ವಿರುದ್ದ ಹರಿಹಾಯ್ದ: ಸಚಿವ ಪ್ರಿಯಾಂಕ್...

ವಿಶ್ವ ಮಹಿಳಾದಿನದಂದು ಸಿಲಿಂಡರ್ ಬೆಲೆ ಏರಿಕೆ: ಇದು ಅಚ್ಚೇ‌ದಿನ್- ಕೇಂದ್ರದ ವಿರುದ್ದ ಹರಿಹಾಯ್ದ: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ:ಮಾ.8:ಇಂದು ವಿಶ್ವ ಮಹಿಳಾ ದಿನವಾಗಿದೆ. ಇದೇ ದಿನದಂತೆ ಕೇಂದ್ರ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಸಿದೆ. ಇದು ಅಚ್ಛೇ ದಿನ್ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಚಿತ್ತಾಪುರ ಪಟ್ಟಣದಲ್ಲಿ ನಡೆದ ರೂ 1069 ಕೋಟಿ ವೆಚ್ಚದ ಕಾಮಗಾರಿಗಳು ಅಡಿಗಲ್ಲು ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಅವರು ಪ್ರಾಸ್ತಾವಿಕ ಭಾಷಣ ಮಾಡುತ್ತಿದ್ದರು.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿಯ ಹಾಗೂ ಸ್ವಾಭಿಮಾನದ ಜೀವನ‌ ನಡೆಸುತ್ತಿದ್ದಾರೆ. ನಿಮ್ಮ ದುಡ್ಡನ್ನು ಗ್ಯಾರಂಟಿ ಯೋಜನೆಗಳ ಮೂಲಕ ನಿಮಗೆ ವಾಪಸ್ ಕೊಟ್ಟರೆ, ಬಿಜೆಪಿಯವರು ಟೀಕಿಸುತ್ತಿದ್ದಾರೆ. ಅವರಿಗೆ ಜನರ ದುಡ್ಡು ಜನರಿಗೆ ಮರುಬಳಕೆಯಾಗುವುದು ಬೇಕಾಗಿಲ್ಲ ಎಂದು ಪ್ರಿಯಾಂಕ್ ಹರಿಹಾಯ್ದರು.

ಚುನಾವಣೆ ಸಂದರ್ಭದಲ್ಲಿ ನಾನು ಕೊಟ್ಟಿರುವ ಭಾಷೆಯಂತೆ ಜನರ ಮನೆಯ ಮಗನಂತೆ ಕೆಲಸ ಮಾಡುತ್ತಿದ್ದೇನೆ. ಇಂದು ರೂ 1069 ಕೋಟಿ ವೆಚ್ಚದ ಕಾಮಗಾರಿಗಳನ್ನು ಜಾರಿಗೊಳಿಸಲಾಗುತ್ತಿದೆ. ಇದು ಪ್ರತಿಯೊಂದು ಹಳ್ಳಿಗೆ ಒಂದು ಕೋಟಿ ಹಾಗೂ ದೊಡ್ಡ ಹಳ್ಳಿಗೆ ಅದಕ್ಕಿಂತ ಹೆಚ್ಚಿನ ಅನುದಾನ ಬಳಕೆಯಾಗಲಿದೆ ಎಂದು ಡಿಸಿಎಂ ಅವರಿಗೆ ಮನವರಿಕೆ ಮಾಡಿದರು.

ರಾಜ್ಯ ಸಭಾ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲೆಯ ರೈತರಿಗೆ ಅತಿ ಹೆಚ್ಚಿನ ಪರಿಹಾರ ನೀಡಲಾಗಿದೆ. ಕಳೆದ ಎರಡುವರೆ ವರ್ಷದಲ್ಲಿ 15.50 ಲಕ್ಷ ರೈತರಿಗೆ ಒಟ್ಟು 2590 ಕೋಟಿ ಅನುದಾನವನ್ನು ಪರಿಹಾರದ‌ ರೂಪದಲ್ಲಿ ನೀಡಲಾಗಿದೆ ಎಂದರು.

ನಾನು ಚಿತ್ತಾಪುರದ ಮೊಮ್ಮಗನಾಗಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ದಿಂದ ನಿಮ್ಮ ಸೇವೆ ಮಾಡುತ್ತಿದ್ದೇನೆ. ನೀವು ನನಗೆ ಹೆಚ್ಚಿನ ಆಶೀರ್ವಾದ ಮಾಡಬೇಕು ನನಗೆ ಇನ್ನೂ ಹೆಚ್ಚಿನ‌‌ ಕೆಲಸ ಮಾಡಲು ಪ್ರೇರೇಪಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದ‌ ಮುಖ್ಯಮಂತ್ರಿ ಹೊರತುಪಡಿಸಿದರೆ ನಾನೇ ನಂತರದ ಟಾರ್ಗೆಟ್ ಆಗಿದ್ದೇನೆ ಎಂದು‌ ಕೆಲವರು ಹೇಳುತ್ತಾರೆ. ಚಿತ್ತಾಪುರದ ಜನರ ಆಶೀರ್ವಾದ ಇರುವವರೆಗೆ ನನಗೆ ಏನು ಆಗುವುದಿಲ್ಲ ಎಂದು ಜನರ ಕರಡಾತನದ‌ ನಡುವೆ ಘೋಷಿಸಿದರು.

ವೇದಿಕೆ ಮೇಲೆ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ ಸೇರಿದಂತೆ ಹಲವರಿದ್ದರು.