Home ಜಿಲ್ಲೆ ಬೀದರ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಲು ದಲಿತ ಸಂಘರ್ಷ ಸಮಿತಿ ಒತ್ತಾಯ

ಬೀದರ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಲು ದಲಿತ ಸಂಘರ್ಷ ಸಮಿತಿ ಒತ್ತಾಯ

ಬೀದರ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣವೇ ಬೀದರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿ ರೈತರ ಹಿತ ಕಾಪಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪೆÇ್ರ. ಬಿ. ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಬಾರಿ ಸಂಪೂರ್ಣ ಮುಂಗಾರು ಮಳೆ ವಿಫಲವಾಗಿರುವುದರಿಂದ ರೈತರು ಈಗಾಗಲೇ ಹೊಲಗಳಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಮಳೆಯ ಕೊರತೆಯಿಂದ ಒಣಗಿ ನಾಶವಾಗುತ್ತಿವೆ,ಬೀಜ, ಗೊಬ್ಬರ ಹಾಗೂ ಕೃಷಿ ಕಾರ್ಯಗಳಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿರುವ ರೈತರು ಈಗ ಸಾಲದ ಹೊರೆ ಹೊತ್ತು ಸಂಕಷ್ಟದಲ್ಲಿದ್ದು, ಅನೇಕ ರೈತರು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರಕ್ಕೆ ಮುಂದಾಗುವ ಆತಂಕ ಎದುರಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಬೀದರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿ, ಜಿಲ್ಲೆಯ ಎಲ್ಲಾ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಅದೇ ರೀತಿ, 2025-26ನೇ ಸಾಲಿನಲ್ಲಿ ಸಹ ಬರಗಾಲ ಘೋಷಣೆಯಾದ ಸಂದರ್ಭದಲ್ಲಿ ಸರ್ಕಾರದಿಂದ ಬೆಳೆ ವಿಮೆ ಹಾಗೂ ಬರಪೀಡಿತ ಅನುದಾನ ಮಂಜೂರಾಗಿದ್ದರೂ, ತಾಂತ್ರಿಕ ದೋಷಗಳ ಕಾರಣದಿಂದ ಜಿಲ್ಲೆಯ ಹಲವಾರು ರೈತರಿಗೆ ಬೆಳೆ ವಿಮೆ ಹಾಗೂ ಬರಪೀಡಿತ ಪರಿಹಾರದ ಹಣ ಇನ್ನೂ ಜಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ರೈತರಿಗೆ ಕೂಡಲೇ ಬೆಳೆ ವಿಮೆ ಹಾಗೂ ಬರಪೀಡಿತ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಿ ರೈತರ ನೆರವಿಗೆ ಸರ್ಕಾರ ಬರಬೇಕು,ಕೃಷಿಯನ್ನೇ ನಂಬಿಕೊಂಡಿರುವ ರೈತ ಸಮುದಾಯ ಸಂಕಷ್ಟದಲ್ಲಿದ್ದು, ಸರ್ಕಾರ ಯಾವುದೇ ವಿಳಂಬ ಮಾಡದೆ ರೈತರ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡು ಆರ್ಥಿಕ ನೆರವು ನೀಡಬೇಕು ಎಂದು ಸಮಿತಿಯ ಜಿಲ್ಲಾ ಸಂಚಾಲಕರಾದ ಧನರಾಜ ಮುಸ್ತಾಪೂರ ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಸಂಯೋಜಕ ಸಂಚಾಲಕ ವಿಜಯಕುಮಾರ ಐಹೊಳೆ, ಅನೀಲಕುಮಾರ ಬಡಿಗೇರ್, ಗುಂಡಪ್ಪಾ ದಂಡೆ, ಔರಾದ ತಾಲ್ಲೂಕು ಸಂಚಾಲಕ ಜೈಪ್ರಕಾಶ ಅಷ್ಟೂರೆ, ಮಲ್ಲಿಕಾರ್ಜುನ ಬಿರಾದಾರ ಉಪಸ್ಥಿತರಿದ್ದರು.