
ಲಕ್ಷೆ÷್ಮÃಶ್ವರ,ಜು೮: ತಾಲೂಕಿನ ಸೂರಣಗಿ ಗ್ರಾಮದಲ್ಲಿ ತುಂಗಭದ್ರಾ ಕುಡಿಯುವ ನೀರಿನ ಪೈಪ್‌ಲೈನ್ ದುರಸ್ತಿ ಕಾಮಗಾರಿ ಬಳಿಕ ಸಿಸಿ ರಸ್ತೆಯನ್ನು ಸಮರ್ಪಕವಾಗಿ ಮರುಸ್ಥಾಪಿಸದ ಕಾರಣ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ÷್ಯದಿಂದ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣಗೊಂಡಿದ್ದು, ವಾಹನ ಸವಾರರು ಹಾಗೂ ಶಾಲಾ ಮಕ್ಕಳು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸಂಬAಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಹಾಳಾಗಿರುವ ರಸ್ತೆಯನ್ನು ಶೀಘ್ರ ದುರಸ್ತಿಪಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.































