ದರ್ಶನ್ ಬಳ್ಳಾರಿ ಜೈಲಿಗೆ ವರ್ಗ: ವಿಚಾರಣೆ ಆ.23 ಕ್ಕೆ ಮುಂದೂಡಿಕೆ

ಬೆಂಗಳೂರು,ಆ. 18-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಅರ್ಜಿಯ ವಿಚಾರಣೆಯನ್ನು ಆ. 23ಕ್ಕೆ ಮುಂದೂಡಿದೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಎಚ್ 64ರಲ್ಲಿ ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿ ವಿಚಾರಣೆಯನ್ನು ಮುಂದೂಡಿದರು.
ಸರ್ಕಾರಿ ಪರ ವಕೀಲರು ವಿಚಾರಣೆ ವೇಳೆ ಹಾಜರಾಗಿ, ಕೊಲೆ ಪ್ರಕರಣದಲ್ಲಿ ಜಾಮೀನು ಸಿಗುವ ಹಿಂದೆ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಯಾವ ಯಾವ ಜೈಲಿನಲ್ಲಿದ್ದರು ಅಲ್ಲಿಗೆ ವರ್ಗಾವಣೆ ಮಾಡಬೇಕು ಕೋರಿ ಅರ್ಜಿ ಸಲ್ಲಿಸಿದ್ದರು.


ಆದರೆ ಜಾಮೀನು ರದ್ದಾದ ದಿನವೇ ದರ್ಶನ್ ಪರ ವಕೀಲರು ಒಂದು ವೇಳೆ ಬಳ್ಳಾರಿಗೆ ಶಿಫ್ಟ್ ಮಾಡುವುದಾದರೆ ನಮ್ಮ ವಾದವನ್ನು ಅಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರಿಗೆ ಅವಕಾಶ ನೀಡಲಾಗಿದೆ. ಮುಂದಿನ ವಿಚಾರಣೆ ವೇಳೆ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾ ಅಥವಾ ಬಳ್ಳಾರಿ ಜೈಲಾ ಎಂಬುದು ನಿರ್ಧಾರವಾಗಲಿದೆ.