
ಕಲಬುರಗಿ,ಮೇ.21: ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವು ಬುಧವರಾ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣಕ್ಕೆ ಭೇಟಿ ನೀಡಿ ಲೋಕೋಪಯೋಗಿ ಮತ್ತು ಕೆ.ಅರ್.ಐ.ಡಿ.ಎಲ್. ಸಂಸ್ಥೆಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಪರಿಶೀಲಿಸಿದರು.
ಕ್ರೀಡಾಂಗಣ ಆವರಣದಲ್ಲಿನ ವಿವಿಧ ಅಂಕಣಗಳಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಕಾಮಗಾರಿಗಳುಲ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ಕಳಪೆ ಕೆಲಸಗಳಿಗೆ ಇಲ್ಲಿ ಅವಕಾಶ ನೀಡಬಾರದು. ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಮೂಲಸೌಕರ್ಯಗಳು ಅಭಿವೃದ್ಧಿಪಡಿಸಬೇಕು ಎಂದು ಎಜೆನ್ಸಿಗಳಿಗೆ ಸೂಚಿಸಿದರು..
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ರಾಹುಲ್ ಕಾಂಬಳೆ, ಕೆ.ಆರ್. ಐ.ಡಿ.ಎಲ್ ಇಲಾಖೆಯ ಅಭಿμÉೀಕ್, ಕ್ರೀಡಾ ಇಲಾಖೆಯ ತರಬೇತುದಾರರಾದ ಸಂಜಯ್, ರಾಜು ಚವ್ಹಾಣ್, ಪ್ರವೀಣ್ ಪುಣೆ, ಅಶೋಕ್ ಎಂ ಹಾಗೂ ಕ್ರೀಡಾಂಗಣದ ಇತರೆ ಸಿಬ್ಬಂದಿ ವರ್ಗದವರು ಹಾಜರಿದ್ದರು.


























