Home ಜಿಲ್ಲೆ ಬೀದಿ ನಾಯಿ ಹಾವಳಿ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಬೀದಿ ನಾಯಿ ಹಾವಳಿ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಡಿಸಿ ಸೂಚನೆ

ವಿಜಯಪುರ, ಮೇ.೭: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ ಸಂ ೩೫ರ ಫೇವರಚಂದ ಕಾಲೊನಿಯ ರಾಜಕುಮಾರ ಲೇಔಟ್ ನಲ್ಲಿ ನಾಯಿ ಕಡಿತಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವನ್ನು ಭೇಟಿ ಮಾಡಿ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಮಗುವಿನ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸಲಹೆ ಮಾಡಿದರು.
ರಾಜಕುಮಾರ ಲೇಔಟ್ ನಿವಾಸಿಯಾಗಿರುವ ೩ ವರ್ಷದ ವಿರಾಜ್ ಸಂತೋಷ ಬಿರಾದಾರ ಮಂಗಳವಾರ ನಾಯಿ ಕಡಿತಕ್ಕೊಳಗಾಗಿದ್ದರಿಂದ ಆತನನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಸುದ್ದಿ ತಿಳಿದ ಜಿಲ್ಲಾಧಿಕಾರಿಗಳು, ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ನಾಯಿ ಕಡಿತಕ್ಕೊಳಗಾದ ಮಗುವಿನ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಮಗು ಔಷಧಿಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಂಡು ಮಾತನಾಡುತ್ತಿದ್ದಾನೆ. ಹಾಗಾಗಿ ಪೋಷಕರ ಆತಂಕಕ್ಕೊಳಗಾಗಬೇಕಿಲ್ಲ ಎಂದರು.
ಜೊತೆಗೆ ಬಾಲಕನಿಗೆ ರೇಬೀಸ್ ವಿರೋಧಿ ಲಸಿಕೆಗಳನ್ನು ನೀಡಲಾಗುತ್ತದೆ. ಜಿಲ್ಲಾಸ್ಪತ್ರೆಯಿಂದಲೂ ಸೂಕ್ತ ಲಸಿಕೆಯನ್ನು ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಇದೇ ವೇಳೆ ತಿಳಿಸಿದರು. ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದಿಂದ ಆಸ್ಪತ್ರೆಗೆ ಭೇಟಿ ನೀಡಿ ಸಮರ್ಪಕ ಸ್ಪಂದಿಸಲಾಗಿದೆ ಎಂದರು.
ಬೀದಿ ನಾಯಿ ಹಿಡಿಯಲು ಹಾಗೂ ಪುನರ್ ವ್ಯವಸ್ಥೆ: ರಾಜ್ ಕುಮಾರ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ಅಧಿಕವಾಗಿದ್ದು, ನಾಯಿಗಳನ್ನು ಹಿಡಿದು ಪುನರ್ ವ್ಯವಸ್ಥೆ (ಡಾಗ್ ಶೆಲ್ಟರ್) ಪಾಲಿಕೆಯಿಂದ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಇದೇ ವೇಳೆ ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ರಾಜು ಕುರಿಯವರ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಸೇರಿದಂತೆ ಖಾಸಗಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಹಾಗೂ ಪಾಲಿಕೆ ಸಿಬ್ಬಂದಿ ಉಪಸ್ಥಿತರಿದ್ದರು.

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ:
ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ
ವಿಜಯಪುರ,ಮೇ.೭: ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ, ಕೆಪಿಐಗಳ ಅನುಷ್ಠಾನಕ್ಕೆ ಜಿಲ್ಲಾ ಪಂಚಾಯತಿನಿAದ ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ. ಕುಂಬಾರ ಹೇಳಿದರು.
ಎಂಪ್ರಿ ಸಂಸ್ಥೆಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕ್ರಿಯಾ ಯೋಜನೆ (ಏSಂPಅಅ) ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿಗಳಾದ ಡಾ. ಪವಿತ್ರಾ ಪಿ. ನಾಯಕ್ ಅವರು ಮಾತನಾಡಿ, ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು.ಹವಾಮಾನ ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ ಹಾಗೂ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಮತ್ತು ಜಿಲ್ಲಾಸ್ಥರದ ದತ್ತಾಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಅರಣ್ಯ ಇಲಾಖೆಯ ಶಿವರುದ್ರಪ್ಪ ಕಬಾಡಗಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಇಲಾಖೆಯು ತೆಗೆದುಕೊಂಡ ಕ್ರಮಗಳ ಕುರಿತು ವಿವರಿಸಿದರು. ಜಲ ಸಂಪನ್ಮೂಲ ವಲಯಕ್ಕೆ ಸಂಬAಧಿಸಿದ ಹವಾಮಾನ ಕ್ರಿಯಾ ಯೋಜನೆ ಕುರಿತು ಜಲ ಸಂಪನ್ಮೂಲ ತಜ್ಞರಾದ ಡಾ. ಶಶಿಕುಮಾರ್ ಎನ್. ಸಂಕ್ಷಿಪ್ತ ಮಾಹಿತಿ ನೀಡಿದರು.
ಸಭೆಯಲ್ಲಿ ಎನ್.ಆರ್.ಡಿ.ಎಂ.ಎಸ್ ಅಧಿಕಾರಿಗಳಾದ ಚನ್ನಮ್ಮ ಕರೆಪ್ಪ, ಎಂಪ್ರಿ ಸಂಸ್ಥೆಯ, ಕುಮಾರಿ ರುಚಿತಾ ಶ್ರೀ ತರಬೇತಿ ಅಸೋಸೊಯೇಟ್ ಹಾಗೂ ತರಬೇತಿ ಸಹಾಯಕರಾದ ರಾಘವೇಂದ್ರ ಎನ್. ಸೇರಿದಂತೆ ತರಬೇತಿ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸುಮಾರು ೫೫ ಮಂದಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ಸಂಸ್ಥೆಗಳ ಸದಸ್ಯರು ಹಾಗೂ ಇತರೆ ಪಾಲುದಾರರು ಭಾಗವಹಿಸಿದ್ದರು.