Home ಜಿಲ್ಲೆ ಬೆಂಗಳೂರು ಕಾರ್ಮಿಕ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ಅಸಮಾಧಾನ

ಕಾರ್ಮಿಕ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ಅಸಮಾಧಾನ

ಕೋಲಾರ, ಜೂ.೨-ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಜೀತಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದಂತೆ ಕಾರ್ಮಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮಂದಗತಿಯ ಕಾರ್ಯವೈಖರಿ ಕುರಿತು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಜಿಲ್ಲಾ ಆಡಳಿತ ಭವನದ ಕಚೇರಿಯಲ್ಲಿ ಸೋಮವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ಹಾಗೂ ಗುರಿಗಳನ್ನು ನಿಗದಿಪಡಿಸಿದರು.


ಕಳೆದ ಸಾಲಿನಲ್ಲಿ ೧೪ ಬಾಲಕಾರ್ಮಿಕರನ್ನು ಮಾತ್ರ ಪತ್ತೆಹಚ್ಚಿ ರಕ್ಷಿಸಲಾಗಿದ್ದು, ಈ ಸಂಖ್ಯೆ ಅತ್ಯಂತ ಕಳಪೆಯಾಗಿದೆ ಎಂದು ಅಧಿಕಾರಿಗಳ ವಿರುದ್ದ ಕಿಡಿ ಕಾರಿದರು.
ಕೇವಲ ೩೭ ಪ್ರಕರಣಗಳಲ್ಲಿ ಮಾತ್ರ ತಪಾಸಣೆ ನಡೆಸಿರುವುದು ಇಲಾಖೆಯ ನಿರ್ಲಕ್ಷ್ಯವನ್ನು ಎತ್ತಿತೋರಿಸುತ್ತದೆ, ಅಧಿಕಾರಿಗಳು ಈ ವಿಚಾರದಲ್ಲಿ ಶೂನ್ಯ ಸಹಿಷತೆ (Zeಡಿo ಣoಟeಡಿಚಿಟಿಛಿe) ಹೊಂದಿರಬೇಕು ಎಂದು ತಾಕೀತು ಮಾಡಿದರು.


೧೪ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದ್ದು, ೧,೬೦,೦೦೦ ರೂ. ದಂಡ ವಸೂಲಿ ಮಾಡಲಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಸಭೆಗೆ ಒದಗಿಸಿದರು.
ಕೇವಲ ದಂಡ ವಿಧಿಸುವುದಷೆ ಅಲ್ಲದೆ, ಪ್ರತಿಯೊಂದು ತಾಲೂಕು ಮಟ್ಟದಲ್ಲಿ ಅಂಗಡಿ ಮತ್ತು ಉದ್ದಿಮೆಗಳ ಮಾಲೀಕರ ಸಭೆ ಕರೆದು ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಜಾಗೃತಿ ಮೂಡಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು


ಜೀತಕಾರ್ಮಿಕರನ್ನು ರಕ್ಷಿಸಿದ ಬಳಿಕ ಅವರಿಗೆ ಬಿಡುಗಡೆ ಪತ್ರ (ಖeಟeಚಿse ಅeಡಿಣiಜಿiಛಿಚಿಣe) ನೀಡುವಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳ ಮಟ್ಟದಲ್ಲಿ ವಿಳಂಬವಾಗುತ್ತಿರುವುದಕ್ಕೆ ಜಿಲ್ಲಾಧಿಕಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


ರಕ್ಷಣೆ ಮಾಡಿದ ಕಾರ್ಮಿಕರನ್ನು ದಿನಗಟ್ಟಲೆ ಕಾಯಿಸದೆ, ತಕ್ಷಣವೇ ಅವರಿಗೆ ಬಿಡುಗಡೆ ಪತ್ರ ಒದಗಿಸುವಂತೆ ಮತ್ತು ಈ ಬಗ್ಗೆ ತಕ್ಷಣ ವರದಿ ನೀಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಬೈಲಾಗಳು ಹಲವು ವಷಗಳಿಂದ (೨೦೨೪ರಿಂದ) ನವೀಕರಣಗೊಂಡಿಲ್ಲ ಎಂಬ ಅಂಶ ಸಭೆಯಲ್ಲಿ ಬೆಳಕಿಗೆ ಬಂದಿದ್ದು, ಈ ಆಡಳಿತಾತ್ಮಕ ಲೋಪದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.


ಸಭೆಯಲ್ಲಿ ಅಪರ ಪೊಲೀಸ್ ವರಿಷ್ಟಾಧಿಕಾರಿ ರವಿಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ, ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿ ವರಲಕ್ಷ್ಮಿ, ಕೋಲಾರ ನಗರಸಭೆ ಆಯುಕ್ತರು ನವಿನಚಂದ್ರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.