
ಜೇವರ್ಗಿ,ಆ.2-ಸಾಲಭಾದೆ ತಾಳದೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜನಿವಾರ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಜನಿವಾರ ಗ್ರಾಮದ ಚನ್ನಬಸಪ್ಪ ತಂದೆ ಸಿದ್ದಪ್ಪ ಜನಿವಾರ (55) ಆತ್ಮಹತ್ಯೆ ಮಾಡಿಕೊಂಡಿರುವ ರೈತ.
ಕಲಬುರಗಿಯ ಎಚ್‍ಡಿಎಫ್‍ಸಿ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕುಗಳಿಂದ 11 ಲಕ್ಷಕ್ಕೂ ಹೆಚ್ಚು ಸಾಲ ಪಡೆದುಕೊಂಡಿದ್ದರು ಎನ್ನಲಾಗಿದ್ದು, ಸಾಲಭಾದೆಯಿಂದ ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ರೈತನಿಗೆ ನಾಲ್ಕು ಜನ ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






























