
ಕಲಬುರಗಿ,ಅ.27-ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ಕಮಲಾಪುರ ತಾಲ್ಲೂಕಿನ ಕುದಮೂಡ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಸಂತೋಷ ಗುರುಪಾದ ಬಿರಾದಾರ (40) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಗ್ರಾಮದ ಹೊರವಲಯದಲ್ಲಿರುವ ತಮ್ಮ ಹೊಲದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತ ರೈತನ ತಾಯಿ ಹೆಸರಿನಲ್ಲಿ ಜಮೀನಿದ್ದು, ಅಂಬಲಗಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕೃಷ್ಣಾ ಗ್ರಾಮೀಣ ಬ್ಯಾಂಕ್ನಲ್ಲಿ ಸಾಲ ಹೊಂದಿದ್ದರು. ಇದರೊಂದಿಗೆ ಖಾಸಗಿಯಾಗಿಯೂ ಸುಮಾರು 20 ಲಕ್ಷ ರೂ. ಸಾಲ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ನರೋಣಾ ಪೆÇಲೀಸ್ ಠಾಣೆಯ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ರೈತರ ಸಾಲಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಪೆÇಲೀಸರು ತಿಳಿಸಿದ್ದಾರೆ.





















