ಸಾಲಬಾಧೆ: ರೈತ ಆತ್ಮಹತ್ಯೆ

ಕಲಬುರಗಿ,ಆ.21-ಸಾಲಬಾಧೆ ತಾಳದೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೌಲಗಾ (ಬಿ) ಗ್ರಾಮದಲ್ಲಿ ನಡೆದಿದೆ.
ಹಣಮಂತ ತಂದೆ ಬಸವರಾಜ ಮೊಸಂಡಿ (35) ಆತ್ಮಹತ್ಯೆ ಮಾಡಿಕೊಂಡಿರುವ ರೈತ.
ಹೊಲದಲ್ಲಿರುವ ಬಾವಿಯ ದಂಡಿ ಮೇಲೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, 3 ಎಕರೆ ಜಮೀನು ಇದೆ. ರಾಷ್ಟ್ರೀಕೃತ ಬ್ಯಾಂಕಿನಲ್ಲಿ 2 ಲಕ್ಷ ಮತ್ತು ಖಾಸಗಿಯಾಗಿ 3.50 ಲಕ್ಷ ಸಾಲವಾಗಿತ್ತು ಎಂದು ತಿಳಿದುಬಂದಿದೆ. ಮೃತ ರೈತನಿಗೆ ಪತ್ನಿ ಮತ್ತು ಒಬ್ಬ ಪುತ್ರ ಇದ್ದಾನೆ ಎಂದು ತಿಳಿದುಬಂದಿದ್ದು, ಫರಹತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಹಾರಕ್ಕೆ ಆಗ್ರಹ
ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಕೌಲಗಾ (ಬಿ) ಗ್ರಾಮದ ರೈತ ಹಣಮಂತ ಮೊಸಂಡಿ ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು, ಸಾಲ ಋಣ ಮುಕ್ತ ಕಾಯ್ದೆ ಜಾರಿಗೆ ತರಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದ್ದಾರೆ.