Home ಮುಖಪುಟ ಸುದ್ದಿ ನಂದಿನಿ ಹಾಲಿನ ದರ ಏರಿಕೆ ಸಂಪುಟ ಸಭೆಯಲ್ಲಿ ನಿರ್ಧಾರ

ನಂದಿನಿ ಹಾಲಿನ ದರ ಏರಿಕೆ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು.ಸೆ.೨೮ – ವಿರೋಧ ಪಕ್ಷದವರ ವಿರೋಧದ ನಡುವೆಯೂ ನಂದಿನಿ ಹಾಲಿನ ದರ ಏರಿಕೆಗೆ ಮುಂದಾಗಿರುವ ರಾಜ್ಯ ಸರ್ಕಾರ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಂಡು ದರ ಹೆಚ್ಚಳ ಪ್ರಕಟಸಲಿದೆ.

ಈ ಸಂಬಂಧ ಬೆಂಗಳೂರಿನ ಐಐಎಸ್‌ಸಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಕುರಿತು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಂಡು, ಬಳಿಕ ದರವನ್ನು ಪ್ರಕಟಿಸಲಾಗುವುದು ಎಂದರು.

ಹಾಲಿನ ದರ ಏರಿಕೆ ಕುರಿತು ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದೆ. ಎಷ್ಟು ದರ ಏರಿಕೆ ಮಾಡಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಕುರಿತು ಮುಖ್ಯಮಂತ್ರಿಗಳಿಗೂ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಪುಟ್ಟರಂಗ ಶೆಟ್ಟಿ ತಿಳಿಸಿದ್ದಾರೆ.

ಹಾಲು ಉತ್ಪಾದಕರು ಪ್ರತಿ ಲೀಟರ್‌ಗೆ ೧೦ ದರ ಏರಿಕೆ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ ದರ ಏರಿಕೆಯಿಂದ ಯಾರಿಗೂ ತೊಂದರೆಯಾಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಇದು ಕೇವಲ ಒಬ್ಬರ ನಿರ್ಧಾರವಲ್ಲ. ಗುರುವಾರ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ದರ ಏರಿಕೆ ಮಾಡಲಾಗುವುದು ಎಂದು ಪುಟ್ಟರಂಗ ಶೆಟ್ಟಿ ತಿಳಿಸಿದರು.