Home ಜಿಲ್ಲೆ ಅಂಬೇಡ್ಕರ್ ಜಯಂತಿ ಅರ್ಥಪೂರ್ಣ, ಅದ್ದೂರಿ ಆಚರಣೆಗೆ ನಿರ್ಧಾರ

ಅಂಬೇಡ್ಕರ್ ಜಯಂತಿ ಅರ್ಥಪೂರ್ಣ, ಅದ್ದೂರಿ ಆಚರಣೆಗೆ ನಿರ್ಧಾರ

ತಾಳಿಕೋಟೆ:ಏ.೮: ಏಪ್ರೀಲ್ ೧೪ ರಂದು ಆಚರಿಸಲಾಗುತ್ತಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜಯಂತಿಯನ್ನು ತಾಲೂಕಾಡಳಿತದ ನೇತೃತ್ವದಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದು ತಹಶಿಲ್ದಾರರಾದ ಪ್ರದೀಪ ದೇವಗಿರಿ ಅವರು ಹೇಳಿದರು.
ಮಂಗಳವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕ ಆಡಳಿತ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದ ಅವರು ನಮ್ಮ ದೇಶಕ್ಕೆ ಸಂವಿದಾನದ ಮೂಲಕ ಸಮಾನತೆಯನ್ನು ಒದಗಿಸಿದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಸಂಭ್ರಮ ಹಾಗೂ ವಿಜೃಂಭಣೆಯಿAದ ಆಚರಿಸಲಾಗುವುದು. ಅಂದು ಬೆಳಿಗ್ಗೆ ೯ ಗಂಟೆಗೆ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅಲ್ಲಿಂದಲೇ ಬಾಬಾ ಸಾಹೇಬರ ಭಾವಚಿತ್ರದ ಭವ್ಯ ಮೆರವಣಿಗೆ ಆರಂಭಿಸಲಾಗುವುದು. ಮೆರವಣಿಗೆ ಸಕಲ ವಾದ್ಯ ಮೇಳಗಳೊಂದಿಗೆ ಶ್ರೀ ಅಂಬಾ ಭವಾನಿ ಮಂದಿರ ರಸ್ತೆ, ಕತ್ರಿ ಬಜಾರ್, ವಿಠ್ಠಲ ಮಂದಿರ ರಸ್ತೆ, ಶಿವಾಜಿ ಮಹಾರಾಜ ಸರ್ಕಲ್, ಮಹಾರಾಣಾಪ್ರತಾಪ್‌ಸಿಂಹ ಸರ್ಕಲ್, ಬಸ್ ನಿಲ್ದಾಣದ ಮುಂಭಾಗದ ರಸ್ತೆಗುಂಟಾ ಹಾಯ್ದು ಶ್ರೀ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ಸರ್ಕಲ್‌ದವರೆಗೆ ತಲುಪುವುದು. ನಂತರ ಅಲ್ಲಿಯೇ ವೇದಿಕೆ ಕಾರ್ಯಕ್ರಮ ಜರುಗಲಿದೆ ಸದರಿ ಜಯಂತಿಯನ್ನು ಸರ್ಕಾರದ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ಪಟ್ಟಣದ ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗುವುದು ಬಾಬಾ ಸಾಹೇಬರ ತತ್ವ ಆದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಲು ಉಪನ್ಯಾಸ ಆಯೋಜಿಸಲಾಗುವುದು ಎಲ್ಲ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುವಂತಾಗಲು ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಜಿ.ಮಠ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ವಹಿಸಿಕೊಟ್ಟ ಜವಾಬ್ದಾರಿಗಳನ್ನು ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪಟ್ಟಣದ ಗಣ್ಯರಾದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಕಟ್ಟಿಮನಿ, ಮುಖಂಡರುಗಳಾದ ಮುತ್ತಪ್ಪ ಚಮಲಾಪೂರ, ಬಸವರಾಜ ಕಟ್ಟಿಮನಿ, ಪ್ರಭುಗೌಡ ಮದರಕಲ್ಲ, ಕಾಶಿನಾಥ ಮುರಾಳ, ಜೈಭೀಮ್ ಮುತ್ತಗಿ, ಪರಶುರಾಮ ತಂಗಡಗಿ, ಪ್ರಕಾಶ ಹಜೇರಿ, ನಾಗೇಶ ಕಟ್ಟಿಮನಿ, ಪರಶುರಾಮ ಕಟ್ಟಿಮನಿ, ಮಹೇಶ ಚಲವಾದಿ, ರಾಮಣ್ಣ ಕಟ್ಟಿಮನಿ, ಸಂಜೀವಪ್ಪ ಬರದೇನಾಳ, ಸಿದ್ದು ಬಾರಿಗಿಡದ, ಗೋಪಾಲ ಕಟ್ಟಿಮನಿ, ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ದಮ್ಮೂರಮಠ, ಸ.ಕ.ಇ. ಶಿವಲಿಂಗಪ್ಪ ಹಚಡದ, ಪಿಎಸ್‌ಐ ಶ್ರೀಮತಿ ಜ್ಯೋತಿ ಖೋತ, ಡಾ.ಶ್ರೀಶೈಲ ಹುಕ್ಕೇರಿ, ಎಸ್.ಸಿ.ಪಾಟೀಲ, ಶಿರಸ್ತೆದಾರಜೆ.ಆರ್.ಜೈನಾಪೂರ, ಸಿಆರ್ ಸಿ ರಾಜು ವಿಜಾಪುರ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.