
ಕಲಬುರಗಿ: ಜೂ.16: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರಿ ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಶಿವಪ್ರಭು ಹಿರೇಮಠ ಅವರ ಸಭೆಯಲ್ಲಿ ನಿರ್ಧರಿಸಲಾಯಿತು.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಇದೇ ಜೂನ್ 27 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಶ್ರೀ ಕೆಂಪೇಗೌಡರ ಜಯಂತಿಯ ಕಾರ್ಯಕ್ರಮ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ಕಡ್ಡಾಯವಾಗಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು. ಸಭೆಯಲ್ಲಿ ನುರಿತ ಉಪನ್ಯಾಸಕರನ್ನು ಸಹ ಆಹ್ವಾನಿಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಜೊತೆಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ (ಪ್ರಭಾರ) ಸಿದ್ದರಾಮ ಸಿಂದೆ ಅವರು ಮಾತನಾಡಿ, ಪೆÇ್ರೀಟೋಕಾಲ್ ಪ್ರಕಾರ ಪತ್ರಿಕಾ ಆಮಂತ್ರಣ ಮುದ್ರಿಸಲಾಗುವುದು. ನಾಡಗೀತೆ, ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಯಂತಿ ಸಮಿತಿ ಅಧ್ಯಕ್ಷರಾಗಿ ಶಿವಯೋಗಪ್ಪ ಚಿತ್ತಾಪುರ ಗುಂಡಗುರ್ತಿ ಅವರನ್ನು ಆಯ್ಕೆ ಮಾಡಲಾಯಿತು. ಉಪನ್ಯಾಸಕರಾಗಿ ಅಣ್ಣಾರಾವ್ ದುಗೊಂಡ ಹಾಗೂ ಗುರುನಾಥ ದೇಸಾಯಿ ಕಾರ್ಯಕ್ರಮದ ನಿರೂಪಕರನ್ನಾಗಿ ಆಯ್ಕೆ ಮಾಡಲಾಯಿತು.
ವೇದಿಕೆ ಮೇಲೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರಾದ ನಾಗಣ್ಣ ಬಿ.ಪಾಟೀಲ್, ನಾಗಪ್ಪ ಮೋಗಾ, ಶರಣಗೌಡ ಪಾಟೀಲ್ ಪಟ್ಟಣ, ಅಣ್ಣಾರಾವ ಬಿ.ಪಾಟೀಲ್, ಮಲ್ಲಣ್ಣಗೌಡ, ಉಮೇಶ ಗೌಡ ಸೇರಿದಂತೆ ಇತರರು ಇದ್ದರು.


























