ಆ.೯ ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಆ. ೧೬ರಂದು ಕೃಷ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಸಂಜೆವಾಣಿ ವಾರ್ತೆ,
ವಿಜಯಪುರ,ಆ.೩: ಜಿಲ್ಲಾಡಳಿತದ ವತಿಯಿಂದ ಆ.೯ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಆ. ೧೬ರಂದು ಶ್ರೀಕೃಷ್ಣ ಜನ್ಮ ದಿನದ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ ಅವರು ತಿಳಿಸಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ. ೯ ರಂದು ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಹಾಗೂ ಆ. ೧೬ರಂದು ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಆ.೯ ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೯.೩೦ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾ ತಂಡಗಳೊAದಿಗೆ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ, ಬೆಳಿಗ್ಗೆ ೧೦-೩೦ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಅಂದು ನಗರದ ಎಲ್ಲ ಮಹನೀಯರ ವೃತ್ತಗಳನ್ನು ಸ್ವಚ್ಛಗೊಳಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿ ಅನಸೂಯಾ ಚಲವಾದಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕÀ ರಾಜಶೇಖರ ದೈವಾಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಸಮಾಜ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.