ಕೋಲಾರ,ಜು,೪- ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ನಡೆದಿರುವ ಅಕ್ರಮಗಳ ಸಮಗ್ರ ತನಿಖೆಗೆ ಆಗ್ರಹಿಸಿ ಸಮತಾಸೈನಿಕ ದಳ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ರಾಜ್ಯಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಜಿಲ್ಲೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ನಡೆಸಿರುವ ಭ್ರಷ್ಟಾಚಾರ, ಸಂಬಂಧಿಕರು, ಆಪ್ತರ ಹೆಸರಿನಲ್ಲಿ ಮಾಡಿರುವ ಅಪಾರ ಆಸ್ತಿಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
೧೯೮೦ ರ ಪೂರ್ವದಲ್ಲಿ ರೈತರಿಗೆ ಕಂದಾಯ ಇಲಾಖೆಯಿಂದ ಮಂಜೂರಾಗಿರುವ ಅರಣ್ಯ ಜಮೀನುಗಳ ಪ್ರಕರಣಗಳಲ್ಲಿ ಜಂಟಿ ಮೋಜಣಿ ಮಾಡಿ ಸರ್ಕಾರದ ಆದೇಶದ ಅನುಸಾರ ಮಂಜೂರಾದ ರೈತರಿಗೆ ಸದರಿ ಜಮೀನುಗಳನ್ನು ನಿಯಮಾನುಸಾರ ಬಿಟ್ಟುಕೊಡಲು ಅರಣ್ಯ ಇಲಾಖೆ ತ್ವರಿತವಾಗಿ ಕ್ರಮವಹಿಸಬೇಕು ಎಂದು ಕೋರಿದ್ದಾರೆ.
ಅರಣ್ಯ ಭೂಮಿಗಳ ಕ್ರೋಢೀಕೃತ ದಾಖಲೆಯಂತೆ ಸರ್ಕಾರದ ಮಟ್ಟದಲ್ಲಿ ಈಗಾಗಲೆ ಎಸ್.ಐ.ಟಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದುಇದರ ಸಂಬಂಧ ಅರಣ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಅಂತಿಮ ತೀರ್ಮಾನ ಆಗುವವರೆಗೆ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಒತ್ತಾಯಿಸಿದ್ದಾರೆ.
ಶ್ರೀನಿವಾಸಪುರ ವಲಯ ಅರಣ್ಯಾಧಿಕಾರಿ ಮಹೇಶ್ ಅವರು, ಹೊರಗುತ್ತಿಗೆಯಲ್ಲಿ ಶ್ರೀನಿವಾಸಪುರ ವಲಯದಲ್ಲಿ ವಾಹನ ಚಾಲಕನಾಗಿ ನೇಮಕ ಮಾಡಿಕೊಂಡಿರುವ ಭರತ್ಕುಮಾರ್ ರೆಡ್ಡಿ ಇವರನ್ನು ತನ್ನ ಮನೆಯ ಸ್ವಂತ ಕೆಲಸಗಳಿಗೆ ಬಳಸಿಕೊಂಡು ಸರ್ಕಾರಿ ವೇತವನ್ನು ಪಾವತಿಸಿ ಸರ್ಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು ಇದರ ಸಮಗ್ರ ತನಿಖೆಯಾಗಬೇಕು ಮತ್ತು ಭರತ್ಕುಮಾರ್ ರೆಡ್ಡಿ ವಾಹನ ಚಾಲಕ ಇವರನ್ನು ಹೊರಗುತ್ತಿಗೆ ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಖಾರಿ ಸರೀನಾ ಸಿಕ್ಕಲಿಗಾರ್ ಅವರು, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿಯಲ್ಲಿ ಅರಣ್ಯದ ಅಂಚಿನಲ್ಲಿರುವ ಗ್ರಾಮಗಳ
ಸರೀನಾ ಸಿಕ್ಕಲಿಗಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಅವರು ಸರ್ಕಾರದ ಯೋಜನೆಯಾದ ನಗರವನ ಕಾಮಗಾರಿಯನ್ನು ಕೋಲಾರ ಮತ್ತು ಬಂಗಾರಪೇಟೆ ವಲಯಗಳಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಂದರೆ ನಗರ ವ್ಯಾಪ್ತಿಯಲ್ಲಿಯೇ ನಿರ್ಮಾಣ ಮಾಡಬೇಕಾದ ಕಾಮಗಾರಿಗಳನ್ನು ನಗರ ಹೊರವಲಯಗಳಲ್ಲಿ ನಿರ್ಮಾಣ ಮಾಡಿ ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡಿರುತ್ತಾರೆ. ಸರ್ಕಾರದ ಅನುದಾನವನ್ನು ಲಪಟಾಯಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವ ಬಗ್ಗೆ ಕೇಂದ್ರ ಸರ್ಕಾರದ ಸಿ.ಇ.ಸಿ ವತಿಯಿಂದ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
































