
ಚಿಂಚೋಳಿ: ಜೋಡೆತ್ತಿನ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುತ್ತಿರುವ ರೈತರನ್ನು ಪೆÇ್ರೀತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ಚಿಂಚೋಳಿ ಪಟ್ಟಣದಲ್ಲಿ ಜೋಡೆತ್ತಿನ ಕೃಷಿಕರಿಗೆ ಸನ್ಮಾನ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.
ಪಟ್ಟಣದ ಹಾರಕೂಡ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದ ಬಳಿಕ, ಜೋಡೆತ್ತಿನ ಕೃಷಿಕರಿಗೆ ಸರ್ಕಾರ ಪ್ರತಿ ತಿಂಗಳು 11,000 ಪೆÇ್ರೀತ್ಸಾಹ ಧನ ನೀಡಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ರೈತರು ಎತ್ತಿನ ಬಂಡಿಗಳ ಬೃಹತ್ ಜಾಥಾ ನಡೆಸಿದರು. 100ಕ್ಕೂ ಹೆಚ್ಚು ಎತ್ತಿನ ಬಂಡಿಗಳೊಂದಿಗೆ ಹೊರಟ ರೈತರು ಚಂದಾಪುರದ ಪ್ರಜಾಸೌಧದವರೆಗೆ ಜಾಥಾ ನಡೆಸಿ, ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ನಂತರ ಜೋಡೆತ್ತಿನ ಕೃಷಿಕರಿಗೆ ಮಾಸಿಕ 11,000 ಪೆÇ್ರೀತ್ಸಾಹ ಧನ ನೀಡುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಚಿಂಚೋಳಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಸತತ ಬರಗಾಲದಿಂದ ರೈತರು ಸಂಕಷ್ಟದಲ್ಲಿ
ಕಾರ್ಯಕ್ರಮವನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಚಿಂಚೋಳಿ ತಾಲೂಕು ಅಧ್ಯಕ್ಷ ವೀರಣ್ಣ ಗಂಗಾಣಿ ಅವರು, ಮಾತನಾಡಿ
ಚಿಂಚೋಳಿ ತಾಲೂಕಿನ ರೈತರು ಸತತ ಬರಗಾಲದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರಿಸುವುದು ರೈತರಿಗೆ ದೊಡ್ಡ ಸವಾಲಾಗಿದೆ ಎಂದು ಹೇಳಿದರು.
ಜೋಡೆತ್ತುಗಳು ನಮ್ಮ ಕೃಷಿ ಪರಂಪರೆಯ ಅವಿಭಾಜ್ಯ ಅಂಗವಾಗಿವೆ. ಆಧುನಿಕ ಕೃಷಿ ಪದ್ಧತಿಗಳ ನಡುವೆಯೂ ಸಾಂಪ್ರದಾಯಿಕ ಜೋಡೆತ್ತಿನ ಕೃಷಿಯನ್ನು ಉಳಿಸಿ ಬೆಳೆಸುತ್ತಿರುವ ರೈತರನ್ನು ಸರ್ಕಾರ ಪೆÇ್ರೀತ್ಸಾಹಿಸಬೇಕು. ರೈತರು ದೇಶದ ಬೆನ್ನೆಲುಬಾಗಿದ್ದು, ಅವರ ಪರಿಶ್ರಮಕ್ಕೆ ಸೂಕ್ತ ಗೌರವ ನೀಡುವುದರ ಜೊತೆಗೆ ಆರ್ಥಿಕ ನೆರವು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಸರ್ಕಾರ ವಿವಿಧ ಯೋಜನೆಗಳಿಗೆ ಅನುದಾನ ನೀಡುವಂತೆಯೇ ರೈತರ ಹಿತದೃಷ್ಟಿಯಿಂದಲೂ ವಿಶೇಷ ಅನುದಾನ ಮೀಸಲಿಡಬೇಕು. ಮುಂಬರುವ ಅಧಿವೇಶನದಲ್ಲಿ ಜೋಡೆತ್ತಿನ ಕೃಷಿಕರಿಗೆ ಪ್ರತಿ ತಿಂಗಳು 11,000 ಪೆÇ್ರೀತ್ಸಾಹ ಧನ ನೀಡುವ ಯೋಜನೆ ಜಾರಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜೋಡೆತ್ತಿನ ಕೃಷಿ ಪದ್ಧತಿಯನ್ನು ಉಳಿಸುವುದರ ಜೊತೆಗೆ ರೈತರ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂಬುದು ರೈತ ಸಂಘದ ಪ್ರಮುಖ ಬೇಡಿಕೆಯಾಗಿದೆ.
ರೈತ ಮುಖಂಡರು, ಸ್ವಾಮೀಜಿಗಳು ಭಾಗಿ
ಪ್ರತಿಭಟನೆಯಲ್ಲಿ ನಿಡಗುಂದಾದ ಪರಮಪೂಜ್ಯ ಷ.ಬ್ರ. ಕರುಣೇಶ್ವರ ಶಿವಾಚಾರ್ಯರು, ಚಿಮ್ಮಾಯಿದ್ದಾಯಿ ಮಠದ ಷ.ಬ್ರ. ವಿಜಯಮಹಾಂತೇಶ್ವರ ಶಿವಾಚಾರ್ಯರು, ರೈತ ಮುಖಂಡರಾದ ಗೌತಮ್ ಪಾಟೀಲ, ಗೋಪಾಲರಾವ ಕಟ್ಟಿಮನಿ, ಶಿವರಾಜ ಪಾಟೀಲ ಗೋಣಗಿ, ಕೆ.ಎಂ. ಬಾರಿ, ಅಬ್ದುಲ್ ಬಾಷೀದ್, ಸಂತೋಷ ಗಡಂತಿ, ಲಕ್ಷ್ಮಣ ಆವುಂಟಿ, ರಾಮರೆಡ್ಡಿ ಪಾಟೀಲ, ಹಣಮಂತ ಪೂಜಾರಿ, ಅಮರ ಲೋಡನೂರ, ಶಿವಶರಣಪ್ಪ ಡೆಂಗಿ, ವೀರೇಶ್ ದೇಸಾಯಿ, ಗೋಪಾಲ್ ಗಾರಂಪಳ್ಳಿ, ಮಲ್ಲಿಕಾರ್ಜುನ ಬೆಳಕೇರಿ, ರೇವಣಸಿದ್ದಪ್ಪ ಆನೇಕಲ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.






















