Home ಜಿಲ್ಲೆ ಬೆಂಗಳೂರು ಶ್ರೀನಿವಾಸ್ ಮೇಲೆ ಹಲ್ಲೆ ಆರೋಪಿಗಳ ಬಂಧನಕ್ಕೆ ಒತ್ತಾಯ

ಶ್ರೀನಿವಾಸ್ ಮೇಲೆ ಹಲ್ಲೆ ಆರೋಪಿಗಳ ಬಂಧನಕ್ಕೆ ಒತ್ತಾಯ

ಕೋಲಾರ: ೧-ತಾಲೂಕಿನ ಮಡೇರಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದ ಶ್ರೀನಿವಾಸ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳ ವಿರುದ್ದ ಎಫ್‌ಐಆರ್ ದಾಖಲಾಗಿದ್ದರೂ ಇನ್ನೂ ಬಂಧಿಸಿಲ್ಲ ಎಂದು ಆರೋಪಿಸಿ ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಹಲ್ಲೆಗೆ ಒಳಗಾದವರ ಕುಟುಂಬದವರು ಮಂಗಳವಾರ ನಗರದ ಹೊರವಲಯದ ನಾಗರಿಕ ಜಾರಿ ಹಕ್ಕು ನಿರ್ದೇಶನಾಲಯ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.


ಘಟನೆ ನಡೆದು ೨೨ ದಿನಗಳಾಗಿದ್ದು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಆರೋಪಿಗಳ ವಿರುದ್ದ ಈಗಾಗಲೇ ಮೂರು ನಾಲ್ಕು ಪ್ರಕರಣಗಳು ದಾಖಲಾಗಿವೆ ಅವರನ್ನು ಗಡಿಪಾರು ಮಾಡಬೇಕಾದ ಅಧಿಕಾರಿಗಳು ಆರೋಪಿಗಳೊಂದಿಗೆ ಶಾಮೀಲು ಆಗಿದ್ದಾರೆ ಕೂಡಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಬೇಕು ಮುಂದಿನ ಮೂರು ದಿನಗಳೊಳಗೆ ಆರೋಪಿಗಳನ್ನು ಬಂದಿಸದೆ ಹೋದರೆ ಜಿಲ್ಲಾಧಿಕಾರಿ ಕಛೇರಿ ಮುಂದೆ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಮಾಜಿ ಸದಸ್ಯೆ ಮಂಜುಳಾ ಶ್ರೀನಿವಾಸ್ , ವಾಲ್ಮೀಕಿ ಯುವಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್, ಬೆಳ್ಳೂರು ಅನಿಲ್ ಸೇರಿದಂತೆ ಹಲ್ಲೆಗೆ ಒಳಗಾದ ಕುಟುಂಬದವರು ಇದ್ದರು.