Home ಜಿಲ್ಲೆ ಕಲಬುರಗಿ ಬೆಳೆವಿಮೆ ಮಾಡಿಸಿದ ರೈತರಿಗೆ ಮಧ್ಯಂತರ ಪರಿಹಾರ ನೀಡಲು ಒತ್ತಾಯ

ಬೆಳೆವಿಮೆ ಮಾಡಿಸಿದ ರೈತರಿಗೆ ಮಧ್ಯಂತರ ಪರಿಹಾರ ನೀಡಲು ಒತ್ತಾಯ

ಕಲಬುರಗಿ,ಆ.27-ಈ ಅನಾವೃಷ್ಟಿಯ ಪರಿಸ್ಥಿತಿಯಲ್ಲಿ ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಾ.ಸಿದ್ರಾಮಪ್ಪ ಪಾಟೀಲ ಧಂಗಾಪೂರ, ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ ಉಡಗಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಅವರು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು, ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆಹಾನಿಯಾದ ರೈತರಿಗೆ ಎನ್‍ಡಿಆರ್‍ಎಫ್ ನಿಯಮದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಪರಿಹಾರ ನೀಡಿವೆ. ಈ ವರ್ಷ ಅನಾವೃಷ್ಟಿಯಿಂದ ತೊಂದರೆಗೆ ಸಿಲುಕಿರುವ ರೈತರಿಗೆ ಎನ್‍ಡಿಆರ್‍ಎಫ್ ನಿಯಮದಂತೆ ಪರಿಹಾರ ನೀಡಬೇಕು ಮತ್ತು ಕಲಬುರಗಿ ಜಿಲ್ಲೆಯನ್ನು ಬರಗಾಲವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು, ಈ ವರ್ಷ ಬೆಳೆ ವಿಮೆ ಮಾಡಿಸಿದ ರೈತರಿಗೆ ಮಧ್ಯಂತರ ಪರಿಹಾರ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.