
ಚಿಕ್ಕಬಳ್ಳಾಪುರ, ಜೂ.೧೩.ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಿಭಕ್ತ ಜಿಲ್ಲೆಗಳ ಹಿರಿಯ ರಾಜಕಾರಣಿ ಹಾಗೂ ಅಹಿಂದ ವರ್ಗದ ಮುಖಂಡ ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಗಂಗರೇ ಕಾಲುವೆ ನಾರಾಯಣಸ್ವಾಮಿ ರವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ವರಿಷ್ಠರು ನೇಮಕ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಕೈಯಿಂದ ವರ್ಗದ ಮುಖಂಡ ಕಳವಾರ ಶ್ರೀಧರ್ ಒತ್ತಾಯಿಸಿದರು.
ಈ ಕುರಿತು ಕಾಂಗ್ರೆಸ್ ಮುಖಂಡರಿಗೆ ಮನವಿ ಮಾಡಿರುವ ಶ್ರೀಧರ್ ರವರು ನಾರಾಯಣಸ್ವಾಮಿ ರವರು ಹಿಂದುಳಿದ ವರ್ಗಕ್ಕೆ ಸೇರಿದ್ದು ಇವರು ಟುಮಾರೋ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಅನೇಕ ಪಾರ್ಲಿಮೆಂಟ್ ಮತ್ತು ಶಾಸನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ತನು ಮನ ಧನ ವಿನಿಯೋಗಿಸಿ ಶ್ರಮಿಸಿದ್ದಾರೆ ಇವರಿಗೆ ಕೈಯಿಂದ ವರ್ಗಕ್ಕೆ ಸೇರಿದವರಾದ ಕಾರಣ ವರಿಷ್ಠರು ನಾರಾಯಣಸ್ವಾಮಿ ರವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಪಕ್ಷ ಉತ್ತಮವಾಗಿ ಸಂಘಟನೆ ಗೊಳ್ಳುತ್ತದೆ ಎಂದು ತಿಳಿಸಿದರು.
ತಾಲೂಕಿನ ಗಂಗರೇ ಕಾಲುವೆಯಲ್ಲಿ ಜನಿಸಿರುವ ನಾರಾಯಣಸ್ವಾಮಿ ರವರು ಶೈಕ್ಷಣಿಕ ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ಹೆಸರು ಮಾಡಿದವರಾಗಿದ್ದು ಇವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಟ್ಟಾಳು ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುವಲ್ಲಿ ಪ್ರಯತ್ನ ಪಟ್ಟವರು ಈ ಹಿಂದೆ ನಡೆದ ಮೂರು ಅವಧಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ದೇವರ ಪ್ರಯತ್ನ ನಡೆಸಿದ್ದು ಕೊನೆಗಳಿಗೆ ಅವಕಾಶ ತಪ್ಪಿದರೂ ಸಹ ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಕಾರ್ಯ ನಡೆಸಿ ಅವರ ಗೆಲುವಿಗೆ ಶ್ರಮಿಸಿದ್ದಾರೆ
ಅಷ್ಟೇ ಅಲ್ಲದೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಇವರು ನಿರಂತರವಾಗಿ ಶ್ರಮಿಸುತ್ತಿದ್ದು ಇವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಹೆಚ್ಚಿನ ಸಂಘಟನಾತ್ಮಕ ಅನುಕೂಲ ದೊರೆಯುತ್ತದೆ ಎಂದು ತಿಳಿಸಿದರು.


































