ವಿದ್ಯುತ್ ಟ್ರಾನ್ಸ್‍ಫಾರ್ಮರ್ ಸ್ಥಳಾಂತರಕ್ಕೆ ಆಗ್ರಹ

ಲಕ್ಷ್ಮೇಶ್ವರ,ಮೇ27: ತಾಲೂಕಿನ ಸುರಣಗಿ ಗ್ರಾಮದಲ್ಲಿ ಬಸ್ ತಂಗುದಾಣ ದ ಸಮೀಪವಿರುವ ವಿದ್ಯುತ್ ಟ್ರಾನ್ಸ್‍ಫಾರ್ಮರ್ ಅನ್ನು ಸ್ಥಳಾಂತರಿಸುವಂತೆ ಗ್ರಾಮಸ್ಥರು ಹೆಸ್ಕಾಂನವರಿಗೆ ಆಗ್ರಹಿಸಿದ್ದಾರೆ. ವಿದ್ಯುತ್ ಟ್ರಾನ್ಸ್ಫಾರ್ಮರ್ ಅತ್ಯಂತ ಕೆಳಮಟ್ಟದಲ್ಲಿದ್ದು ಏನಾದರೂ ಅವಘಡ ಸಂಭವಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ.


ಈ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಥಳಾಂತರಿಸುವಂತೆ ಕಳೆದ ಎರಡು ವರ್ಷಗಳಿಂದಲೂ ಲಕ್ಷ್ಮೇಶ್ವರ ಹೆಸ್ಕಾಂ ಅಧಿಕಾರಿಗಳಿಗೆ ವಿನಂತಿಸಿದ್ದರರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ದೂರಾಗಿದೆ.