Home ಜಿಲ್ಲೆ ಕಲಬುರಗಿ ಮಲ್ಲಿಕಾರ್ಜುನ ಖರ್ಗೆ ಪ್ರತಿಮೆ ಸ್ಥಾಪನೆಗೆ ಒತ್ತಾಯ

ಮಲ್ಲಿಕಾರ್ಜುನ ಖರ್ಗೆ ಪ್ರತಿಮೆ ಸ್ಥಾಪನೆಗೆ ಒತ್ತಾಯ

ಕಲಬುರಗಿ: ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಮೆಯನ್ನು ಕಲಬುರಗಿ ವಿಧಾನಸೌಧದ ಮುಂಭಾಗದಲ್ಲಿ ಸ್ಥಾಪಿಸಲು ಸ್ಥಳ ಮಂಜೂರು ಮಾಡಬೇಕು ಹಾಗೂ ಜಿಲ್ಲೆಯಲ್ಲಿ ಖರ್ಗೆ ಹೆಸರಿನಲ್ಲಿ ಸಾಂಸ್ಕøತಿಕ ಭವನ ನಿರ್ಮಾಣಕ್ಕಾಗಿ 2 ಎಕರೆ ಜಮೀನು ಮಂಜೂರು ಮಾಡಬೇಕು ಎಂದು ಮಾದನಹಿಪ್ಪರಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮೃತ ಸಜ್ಜನ್ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಈ ಕುರಿತು ಮಹಾನಗರ ಪಾಲಿಕೆಯ ಮಹಾಪೌರರಿಗೆ ಮನವಿ ಮಾಡಿರುವ ಅವರು, ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನೀಡಿರುವ ಅಪಾರ ಕೊಡುಗೆ ಹಾಗೂ ಅವರ ಸುದೀರ್ಘ ಸಾರ್ವಜನಿಕ ಸೇವೆ ಪರಿಗಣಿಸಿ ಕಲಬುರಗಿ ವಿಧಾನಸೌಧದ ಮುಂಭಾಗದಲ್ಲಿರುವ ಗಾರ್ಡನ್ ಪ್ರದೇಶದ ಬಳಿ 100 100 ಅಡಿ ಜಾಗವನ್ನು ಮಂಜೂರು ಮಾಡಿ ಅವರ ಪ್ರತಿಮೆ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
371ಜೆ ಕಾಯಿದೆ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಈ ಭಾಗದ ಜನರಿಗೆ ಶಿಕ್ಷಣ, ಉದ್ಯೋಗ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿ ವಿಶೇಷ ಅವಕಾಶಗಳು ಮತ್ತು ಸೌಲಭ್ಯಗಳು ದೊರೆಯುವಂತೆ ಮಾಡಿದ್ದಾರೆ. ಇದರ ಜತೆಗೆ, ಜಿಲ್ಲೆಯಲ್ಲಿ ಇಎಸ್‍ಐ ಆಸ್ಪತ್ರೆ ಸೇರಿ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ತರಲು ಶ್ರಮಿಸಿದ್ದಾರೆ.ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಡಾ.ಮಲ್ಲಿಕಾರ್ಜುನ ಖರ್ಗೆ ಹೆಸರಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕಾಗಿ 2 ಎಕರೆ ಜಮೀನನ್ನು ಮಂಜೂರು ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.